ದಾವಣಗೆರೆ ತಾಲ್ಲೂಕಿನ ಬೆಳವನೂರು ಗ್ರಾಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರ ಅಧ್ಯಕ್ಷತೆಯಲ್ಲಿ ಇಂದು ಜಿಲ್ಲಾ ಮಟ್ಟದ ಜನತಾ ದರ್ಶನ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ. ತಿಳಿಸಿದ್ದಾರೆ.
ಈ ಜನತಾ ದರ್ಶನ ಕಾರ್ಯಕ್ರಮದಲ್ಲಿ ಸಾರ್ವಜನಿಕರ ಕುಂದು- ಕೊರತೆಗಳನ್ನು ಸ್ವೀಕರಿಸಿ ಸ್ಥಳದಲ್ಲಿಯೇ ಪರಿಹಾರ ಕಂಡುಕೊಳ್ಳಲಾಗುತ್ತದೆ. ಜನತಾ ದರ್ಶನ ಕಾರ್ಯಕ್ರಮದಲ್ಲಿ ಸ್ವೀಕೃತವಾದ ಎಲ್ಲಾ ಅರ್ಜಿಗಳನ್ನು ಸಾರ್ವಜನಿಕ ಕುಂದುಕೊರತೆಯ ನಿವಾರಣೆ ವ್ಯವಸ್ಥೆಯ ತಂತ್ರಾಂಶದಲ್ಲಿ ದಾಖಲಿಸಲಾಗುತ್ತದೆ. ಇದಕ್ಕಾಗಿ ಕುಂದುಕೊರತೆಗಳನ್ನು ದಾಖಲಿಸಲು ಇಲಾಖಾವಾರು ಪ್ರತ್ಯೇಕ ಕೌಂಟರ್‍ಗಳನ್ನು ತೆರೆಯಲಾಗುತ್ತದೆ.