ಹರಿಹರ, ಅ.27- ತಾಲ್ಲೂಕಿನ ಭಾನುವಳ್ಳಿ ಗ್ರಾಮದ ಗ್ರಾಮೀಣ ಪ್ರತಿಭೆ ಅಂತರರಾಷ್ಟ್ರೀಯ ಖ್ಯಾತಿಯ ಬಾಲ ಯೋಗ ಪಟು ಸೃಷ್ಟಿ ಕೆ. ವೈ. ಶಾಂಭವಿ ಸಿರಿಗೆರೆಯಲ್ಲಿ ನಡೆದ ಬೆಂಗಳೂರು ವಿಭಾಗ ಹಾಗೂ ರಾಜ್ಯಮಟ್ಟದ ಯೋಗ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟದ ಯೋಗ ಸ್ಪರ್ಧೆಯಲ್ಲಿ ಭಾಗವಹಿಸುವ ಅರ್ಹತೆ ಪಡೆದುಕೊಂಡಿದ್ದಾಳೆ.
ಡಿಸೆಂಬರ್ ತಿಂಗಳಲ್ಲಿ ಉತ್ತರ ಭಾರತದ ತ್ರಿಪುರ, ಇಲ್ಲವೇ ರಾಜಸ್ಥಾನದ ಜೈಪುರದಲ್ಲಿ ನಡೆಯುವ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ.
ತರಳಬಾಳು ವಿದ್ಯಾಸಂಸ್ಥೆ ಸಿರಿಗೆರೆ, ಉಪ ನಿರ್ದೇಶಕರು, ಶಿಕ್ಷಣ ಇಲಾಖೆ ಚಿತ್ರದುರ್ಗ ಇವರ ಸಹಯೋಗದಲ್ಲಿ ನಡೆದ ವಿಭಾಗ ಮಟ್ಟದ ಹಾಗೂ ರಾಜ್ಯ ಮಟ್ಟದ ಯೋಗ ಸ್ಪರ್ಧೆಯಲ್ಲಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲೆ ವಿಭಾಗದ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದು ರಾಷ್ಟ ಮಟ್ಟಕ್ಕೆ ಆಯ್ಕೆ ಯಾಗಿದ್ದಾರೆ.
ಇನ್ಸೈಟ್ಸ್ ಐಎಎಸ್ ಸಂಸ್ಥೆ ಸಂಸ್ಥಾಪಕ ಜಿ.ಬಿ. ವಿನಯ್ ಕುಮಾರ್, ಭಾರತೀಯ ಸಾಂಸ್ಕೃತಿಕ ಅಕಾಡೆಮಿಯ ಮಾಗಾನಹಳ್ಳಿ ಮಂಜುನಾಥ್, ಜಿಲ್ಲಾ ವರದಿಗಾರ ಕೂಟದ ಅಧ್ಯಕ್ಷ ಕೆ. ಏಕಾಂತಪ್ಪ, ಹಿರಿಯ ಪತ್ರಕರ್ತರಾದ ಪುರಂದರ್ ಲೋಕಿಕೆರೆ, ಸಿದ್ದಯ್ಯ, ಜಿಲ್ಲಾ ಇಪ್ಟಾ ಕಲಾ ತಂಡದ ಪದಾಧಿಕಾರಿಗಳು ರಾಷ್ಟ್ರಮಟ್ಟದಲ್ಲೂ ಅದ್ವಿತೀಯ ಸಾಧನೆ ಮಾಡಲೆಂದು ಹಾರೈಸಿದ್ದಾರೆ.