ಹರಿಹರದಲ್ಲಿ ಇಂದು ಬೃಹತ್ ಉದ್ಯೋಗ ಮೇಳ

ನ.30ರಂದು ವಿವಿಧ ಕಾರ್ಯಕ್ರಮಗಳು

ಬರುವ ನವೆಂಬರ್ 30ರಂದು ದಿ. ಜಿ ಮಲ್ಲಿಕಾರ್ಜುನಪ್ಪನವರ ಪುಣ್ಯ ಸ್ಮರಣೆಯ ನಿಮಿತ್ತ, ನವೆಂಬರ್ ತಿಂಗಳಿನಲ್ಲಿ ಉದ್ಯೋಗ ಮೇಳ, ಉಚಿತ ವೈದ್ಯಕೀಯ ಶಿಬಿರ, ವಾಕ ಥಾನ್, ಯುವ  ಸಂವಾದ, ಸಕ್ರಿಯ ಮಹಿಳಾ ಸಂಘಗಳಿಗೆ, ಸಣ್ಣ ಕೈಗಾರಿಕೆಗೆ ಬೇಕಾದ ಅಗತ್ಯ ಸಂಪನ್ಮೂಲಗಳ ವಿತರಣೆ  ಮುಂತಾದ ಸಾಮಾ ಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಎಂ.ಆರ್. ಪ್ರಭುದೇವ್ ಹೇಳಿದರು.

ದಾವಣಗೆರೆ, ಅ. 29- ಶ್ರೀ  ಜಿ.ಮಲ್ಲಿಕಾರ್ಜುನಪ್ಪ ಮತ್ತು ಶ್ರೀಮತಿ ಹಾಲಮ್ಮ ಚಾರಿಟಿ ಫೌಂಡೇಶನ್ ವತಿಯಿಂದ ಹರಿಹರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ  ನಾಳೆ ದಿನಾಂಕ 30ರ ಸೋಮವಾರ ಬೃಹತ್ ಉದ್ಯೋಗ ಮೇಳ ಹಮ್ಮಿಕೊಂಡಿರುವುದಾಗಿ ಟ್ರಸ್ಟ್‌ನ ಸದಸ್ಯ ಎಂ.ಆರ್. ಪ್ರಭುದೇವ್ ತಿಳಿಸಿದ್ದಾರೆ.

ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಸಂಸದ ಜಿ.ಎಂ. ಸಿದ್ದೇಶ್ವರ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಶಾಸಕ ಬಿ.ಪಿ. ಹರೀಶ್ ಅಧ್ಯಕ್ಷತೆ ವಹಿಸಲಿದ್ದಾರೆ. ಬಿಜೆಪಿ ಜಿಲ್ಲಾಧ್ಯಕ್ಷ ಹನಗವಾಡಿ ವೀರೇಶ್, ಹರಿಹರ ನಗರ ತಾಲ್ಲೂಕು ಬಿಜೆಪಿ ಅಧ್ಯಕ್ಷ ಅಜಿತ್ ಸಾವಂತ್, ಗ್ರಾಮಾಂತರ ಮಂಡಲ ಅಧ್ಯಕ್ಷ ಲಿಂಗರಾಜು, ಟ್ರಸ್ಟಿ ಜಿ.ಎಸ್. ಅನಿತ್ ಕುಮಾರ್ ಹಾಗೂ  ಇತರರು ಭಾಗವಹಿಸಲಿದ್ದಾರೆ ಎಂದು ಹೇಳಿದರು.

ತೇಜಸ್ವಿನಿ ಕಟ್ಟಿಮನಿ ಟಿ.ಆರ್. ಮಾತನಾಡಿ, ಉದ್ಯೋಗ ಮೇಳದಲ್ಲಿ  50 ಕ್ಕೂ ಹೆಚ್ಚಿನ ಕಂಪನಿಗಳು ಭಾಗವಹಿಸಲಿದ್ದು, ಆರು ಸಾವಿರಕ್ಕೂ ಅಧಿಕ ಉದ್ಯೋಗಾವಕಾಶಗಳು ಲಭ್ಯವಿವೆ.  ಎಸ್.ಎಸ್.ಎಲ್.ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಪದವಿ, ಇಂಜಿನಿಯರಿಂಗ್ (ಎಲೆಕ್ಟ್ರಾನಿಕ್ಸ್, ಎಲೆಕ್ಟ್ರಿಕಲ್, ಮೆಕ್ಯಾನಿಕಲ್, ಕೆಮಿಕಲ್), ಎಂಬಿಎ ಮುಗಿಸಿದ  ವಿದ್ಯಾರ್ಥಿಗಳು ಈ ಬೃಹತ್ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ ಎಂದು ಹೇಳಿದರು.

ಮೇಳದಲ್ಲಿ ಭಾಗವಹಿಸಲು ಯಾವುದೇ ಶುಲ್ಕ ಇರುವುದಿಲ್ಲ. ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ದಾಖಲೆಗಳು ಮತ್ತು ಸ್ವ ವಿವರದೊಂದಿಗೆ ಕನಿಷ್ಠ ಐದು ಸೆಟ್ ಜೆರಾಕ್ಸ್ ಪ್ರತಿಗಳನ್ನು ಕಡ್ಡಾಯವಾಗಿ ತರಬೇಕಿದೆ ಎಂದರು.

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ  ಪ್ರೊ. ವಿರುಪಾಕ್ಷಪ್ಪ ಹೆಚ್ ಮಾತನಾಡಿದರು.

ಉದ್ಯೋಗ ಮೇಳದಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು https://forms.gle/BN5 KqYfovodCXzAQ8  ಲಿಂಕ್ ಮೂಲಕ ತಮ್ಮ ಸ್ವ ವಿವರವನ್ನು ನೋಂದಾಯಿಸಬಹುದು. ಮಾಹಿತಿಗಾಗಿ ಮೊ. 8296502393, 7892956667ಗೆ ಸಂಪರ್ಕಿಸಬಹುದು. ಪತ್ರಿ ಕಾಗೋಷ್ಠಿಯಲ್ಲಿ ಮಂಜುನಾಥ್ ಉಪಸ್ಥಿತರಿದ್ದರು.

error: Content is protected !!