ಕಾಂಗ್ರೆಸ್ ಆಡಳಿತದಲ್ಲಿ ಅಭಿವೃದ್ಧಿ ಶೂನ್ಯ

ಕಾಂಗ್ರೆಸ್ ಆಡಳಿತದಲ್ಲಿ ಅಭಿವೃದ್ಧಿ ಶೂನ್ಯ

ದಾವಣಗೆರೆ, ನ. 1- ರಾಜ್ಯದಲ್ಲಿನ ಕಾಂಗ್ರೆಸ್ ಆಡಳಿತದಲ್ಲಿ ಅಭಿವೃದ್ಧಿ ಶೂನ್ಯವಾಗಿದ್ದು, ಪಕ್ಷದಲ್ಲಿ ಗುಂಪುಗಾರಿಕೆ ಹೆಚ್ಚುತ್ತಿದೆ. ಹಾವೇರಿಯಲ್ಲಿ 42 ರೈತರು ಆತ್ಮಹತ್ಯೆ ಮಾಡಿ ಕೊಂಡಿದ್ದರೂ ಮುಖ್ಯ ಮಂತ್ರಿ, ಉಪ ಮುಖ್ಯಮಂತ್ರಿ, ಸಚಿವರು ಚಕಾರ ಎತ್ತುತ್ತಿಲ್ಲ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ್ ಆರೋಪಿಸಿದರು.

ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರದ ವೈಫಲ್ಯಗಳನ್ನು ಮಾರೆ ಮಾಚಲು ಆಪರೇಷನ್ ಕಮಲ, ಹುಲಿ ಉಗುರು ಎಂದೆಲ್ಲಾ ನಾಟಕ ಮಾಡುತ್ತಿದ್ದಾರೆ ಅಷ್ಟೇ. ಅರಣ್ಯ ಇಲಾಖೆ ಇಷ್ಟು ದಿನ ನಿದ್ರೆಯಲ್ಲಿತ್ತಾ? ಎಂದು ಪ್ರಶ್ನಿಸಿದರು.

ಆಪರೇಷನ್ ಕಮಲ ಎನ್ನುವುದೇ ಮುರ್ಖತನದ ಪರಮಾವಧಿ. ಕಾಂಗ್ರೆಸ್ ಸರ್ಕಾರವನ್ನು ಕೆಳಗಿಳಿಸುವ ಪ್ರಯತ್ನವನ್ನು ಹೊರಗಿನವರಲ್ಲ. ಸ್ವಪಕ್ಷದವರೇ ಬೀಳಿಸುತ್ತಾರೆ. ಕಾದು ನೋಡಿ ಎಂದರು.

ಡಿ.ಕೆ. ಶಿವಕುಮಾರ್, ಸತೀಶ ಜಾರಕಿಹೊಳಿ, ಶಾಮನೂರು ಶಿವಶಂಕರಪ್ಪ, ಬಿ.ಕೆ.ಹರಿಪ್ರಸಾದ್,  ಬಸವರಾಜ್ ರಾಯರೆಡ್ಡಿ ಅವರೇ ಕಾಂಗ್ರೆಸ್ ಸರ್ಕಾರದ ಬುಡವನ್ನು ಅಲ್ಲಾಡಿಸಲು ಶುರು ಮಾಡಿದ್ದಾರೆಂದು ಹೇಳಿದರು.

ಡಿ.ಕೆ. ಶಿವಕುಮಾರ್ ಗುಂಪಿನವರು ಒಂದು ಕಡೆ ಸಭೆ ನಡೆಸುತ್ತಿದ್ದರೆ, ಮತ್ತೊಂದು ಕಡೆ ಸಿದ್ದರಾಮಯ್ಯ ಅವರ ಗುಂಪು ಸಭೆ ನಡೆಸುತ್ತಿದೆ. ಸಿದ್ದ ರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಕುರ್ಚಿಗಾಗಿ ಕಿತ್ತಾಡುತ್ತಿದ್ದಾರೆ ಎಂದು ಟೀಕಿಸಿದರು.

ಸುಳ್ಳು ಭರವಸೆ ನೀಡುವ ಮೂಲಕ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದ್ದು, ಉಚಿತ ಭಾಗ್ಯಗಳಿಗೆ 65 ರಿಂದ 70 ಸಾವಿರ ಕೋಟಿ ಹಣವನ್ನು ಸಾಲ ಮಾಡುತ್ತಿದೆ. ರಾಜ್ಯದಲ್ಲಿ ಅಭಿವೃದ್ಧಿ ಎಂಬುದೇ ಮರೀಚಿಕೆಯಾಗಿದೆ. ತೀವ್ರ ಬರ ಆವರಿಸಿ ದ್ದರೂ, ರೈತರ ನೆರವಿಗೆ ಧಾವಿಸುತ್ತಿಲ್ಲ ಎಂದು ಹೇಳಿದರು. ಕೃಷಿ ಪಂಪ್‌ಸೆಟ್‌ಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆ ಮಾಡುತ್ತಿಲ್ಲ. ಮಹಾರಾಷ್ಟ್ರ ಮಾದರಿ ಯಲ್ಲಿಯೇ ರಾಜ್ಯದಲ್ಲಿ ಕಾಂಗ್ರೆಸ್‌ನವರು ಅಧಿಕಾರವನ್ನು ಕಳೆದು ಕೊಳ್ಳಲಿದ್ದಾರೆ. ನಾವು ಯಾವುದೇ ಆಪರೇಶನ್ ಮಾಡುವುದಿಲ್ಲ. ಜನರೆ ಸರ್ಕಾರಕ್ಕೆ ಬುದ್ದಿ ಕಲಿಸಲಿದ್ದಾರೆಂದರು.

error: Content is protected !!