ದಾವಣಗೆರೆ, ನ. 2- ಶಿವಾಜಿ ನಗರದ ಹಳೇ ಊರು ದುಗ್ಗಮ್ಮಪೇಟೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಜ್ಯೋತ್ಸವವನ್ನು ಆಚರಿಸಲಾಯಿತು. ಶಾಲೆಯ ಅಧ್ಯಕ್ಷರು ಹಾಗೂ ಕರ್ನಾಟಕ ರಾಜ್ಯ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ಸಮನ್ವಯ ವೇದಿಕೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಿಂಗರಾಜು ಹಾವನೂರು ಮಾತನಾಡಿ, ಕನ್ನಡ ಭಾಷೆಯು ಅಗಾಧ ಜ್ಞಾನ ಭಂಡಾರ ಹೊಂದಿರುವುದರಿಂದ ಅತಿ ಹೆಚ್ಚು ಜ್ಞಾನಪೀಠ ಪ್ರಶಸ್ತಿಗಳನ್ನು ಹೊಂದಿದ ಭಾಷೆ ಎಂದು ತಿಳಿಸಿದರು.
ಶಾಲೆಯ ಮುಖ್ಯಶಿಕ್ಷಕರಾದ ಶ್ರೀಮತಿ ಕಲ್ಲಮ್ಮ ಸ್ವಾಗತಿಸಿದರು. ಶಿಕ್ಷಕ ಪ್ರಭುದೇವರು ಪ್ರಾಸ್ತಾವಿಕ ನುಡಿಗಳನ್ನಾಡಿದರು. ಶಿಕ್ಷಕಿಯರಾದ ಶ್ರೀಮತಿ ಶಾರದಾ ವಂದಿಸಿದರು.