ವಿಜಯೇಂದ್ರ ಪದಗ್ರಹಣ: ಪೂಜೆ, ಸಂಭ್ರಮ

ವಿಜಯೇಂದ್ರ ಪದಗ್ರಹಣ: ಪೂಜೆ, ಸಂಭ್ರಮ

ದಾವಣಗೆರೆ, ನ.15-  ಭಾರತೀಯ ಜನತಾ ಪಕ್ಷದ ನೂತನ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡಿರುವ  ಬಿ.ವೈ. ವಿಜಯೇಂದ್ರ ಅವರ ಪದಗ್ರಹಣ ಸಮಾರಂಭದ ಹಿನ್ನೆಲೆಯಲ್ಲಿ ಬಿಜೆಪಿಯಿಂದ ನಗರದ ಹರಳೆಣ್ಣೆ ಕೊಟ್ರಬಸಪ್ಪ ವೃತ್ತದಲ್ಲಿರುವ ಶ್ರೀ ವರ ಸಿದ್ದಿವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಸಂಭ್ರಮಾಚರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಯಶವಂತರಾವ್ ಜಾಧವ್, ವಿಜಯೇಂದ್ರ ಅವರು ರಾಜ್ಯಾಧ್ಯಕ್ಷರಾಗಿ ಪದಗ್ರಹಣ ಮಾಡುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾಗಣಪತಿ ಆಶೀರ್ವಾದದೊಂದಿಗೆ ರಾಜ್ಯದಲ್ಲಿ 28ಕ್ಕೆ 28 ಸ್ಥಾನ ಗೆಲ್ಲುವ ಶಕ್ತಿ ನೀಡಲಿ ಎಂದು ಗಣಪತಿಗೆ ಪೂಜೆ ಸಲ್ಲಿಸಲಾಗುತ್ತಿದೆ ಎಂದರು.

ಜಿಲ್ಲಾ ಉಪಾಧ್ಯಕ್ಷ ಶ್ರೀನಿವಾಸ ದಾಸಕರಿಯಪ್ಪ ಮಾತನಾಡಿ, ವಿಜಯೇಂದ್ರ ಅವರು ಎಲ್ಲರನ್ನೂ ಜೊತೆಗೆ ಕೊಂಡೊಯ್ಯುತ್ತಾರೆ ಎಂಬ ವಿಶ್ವಾಸ ಹಾಗೂ ನಂಬಿಕೆ ಇದೆ ಎಂದು ಹೇಳಿದರು.

ದೂಡಾ ಮಾಜಿ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್ ಮಾತನಾಡಿ, ಪಕ್ಷವನ್ನು ತಳಮಟ್ಟದಿಂದ ಸಂಘಟಿಸುವ ಸಾಮರ್ಥ್ಯ ವಿಜಯೇಂದ್ರ ಅವರಿಗಿದೆ. ಅವರೊಂದಿಗೆ ನಾವೆಲ್ಲರೂ ಕೈ ಜೋಡಿಸಿ ಪಕ್ಷದ ಗೆಲುವಿಗೆ ಶ್ರಮಿಸುತ್ತೇವೆ ಎಂದರು.

ನಗರ ಪಾಲಿಕೆ ಮಾಜಿ ಸದಸ್ಯ ಶಿವನಗೌಡ ಟಿ.ಪಾಟೀಲ್, ಉತ್ತರ ಯುವ ಮೋರ್ಚಾ ಉಪಾಧ್ಯಕ್ಷರಾದ ಹರೀಶ್ ಶಾಮನೂರ, ಟಿಂಕರ್ ಮಂಜಣ್ಣ, ಬಿ.ರಮೇಶ್‌ ನಾಯ್ಕ, ದಕ್ಷಿಣ ಮಂಡಲದ ಅಧ್ಯಕ್ಷ  ಆನಂದ್ ರಾವ್ ಸಿಂಧೆ, ಪ್ರಧಾನ ಕಾರ್ಯದರ್ಶಿ ರಾಜು ನೀಲಗುಂದ, ಗುರು ಸೋಗಿ, ಪಾಲಿಕೆ ಸದಸ್ಯ ಸೋಗಿ ಶಾಂತಕುಮಾರ್, ಜೊಳ್ಳಿ ಗುರು, ಅಜ್ಜಂಪುರ ಶೆಟ್ರು ವಿಜಯಕುಮಾರ್, ಅಜ್ಜಂಪುರ ಮುತ್ತಣ್ಣ, ಮಹಿಳಾ ಮೋರ್ಚಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪುಷ್ಪಾ ವಾಲಿ, ನೀತಾ ನಂದೀಶ್, ದಕ್ಷಿಣ ಯುವ ಮೋರ್ಚಾ ಅಧ್ಯಕ್ಷ ರಾಕೇಶ್, ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಯಲ್ಲೇಶ್, ಶಶಿಧರ್, ಅತಿಥ್ ಅಂಬರಕರ್, ಗುರು ಕೆ.ವಿ.ಜಯಪ್ರಕಾಶ್ ಮಾಗಿ, ಶ್ರೀಕಾಂತ್ ನೀಲಗುಂದ, ಪಣಿ ಹೊಸಳ್ಳಿಮಠ, ಎಸ್.ಎಲ್. ನಾಗರಾಜ್, ವಿನಯ್ ಎಬಿವಿಪಿ  ಸೇರಿದಂತೆ ಅನೇಕ ಕಾರ್ಯಕರ್ತರು ಸಂಭ್ರಮಾಚರಣೆಯಲ್ಲಿ ಭಾಗವಹಿಸಿದ್ದರು.

error: Content is protected !!