ದಾವಣಗೆರೆ,ನ.17-ಕರ್ನಾಟಕ ಸರ್ಕಾರವು ಪ್ರತಿ ವರ್ಷ ನಡೆಸುವ ಅಖಿಲ ಭಾರತ ಸಹಕಾರ ಸಪ್ತಾಹದ ಸಂದರ್ಭದಲ್ಲಿ ಸಹಕಾರ ಕ್ಷೇತ್ರದಲ್ಲಿನ ಅನುಪಮ ಸೇವೆಗಾಗಿ ಮಹನೀಯರಿಗೆ ಕರ್ನಾಟಕ ಸರ್ಕಾರ ಕೊಡಮಾಡುವ `ಸಹಕಾರ ರತ್ನ’ ಪ್ರಶಸ್ತಿಗೆ ದಾವಣಗೆೆರೆ ಜಿಲ್ಲೆಯಿಂದ ಇಬ್ಬರು ಭಾಜನರಾಗಿದ್ದಾರೆ.
ಸಿಟಿ ಕೋ-ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ನಿರಂಜನ್ ನಿಶಾನಿಮಠ್ ಮತ್ತು ಶ್ರೀ ಕನ್ಯಕಾಪರಮೇಶ್ವರಿ ಕೋ-ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ರಾಜನಹಳ್ಳಿ ಜಿ. ಶ್ರೀನಿವಾಸಮೂರ್ತಿ ಅವರುಗಳು `ಸಹಕಾರ ರತ್ನ’ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ವಿಜಯಪುರದ ವಿಜಯಪುರ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಆವರಣದಲ್ಲಿ ಇದೇ ದಿನಾಂಕ 20ರ ಸೋಮವಾರ ಬೆಳಿಗ್ಗೆ 9 ಗಂಟೆಗೆ ಏರ್ಪಾಡಾಗಿರುವ 70ನೇ ಅಖಿಲ ಭಾರತ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಪ್ರಶಸ್ತಿ ವಿಜೇತರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.