ದಾವಣಗೆರೆ, ನ.20 – ಕೃಷಿ ಸಚಿವ ಎನ್.ಚೆಲುವರಾಯಸ್ವಾಮಿ ಅವರು ನಾಡಿದ್ದು ದಿನಾಂಕ 22 ಬುಧವಾರ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ಅಂದು ಬೆಳಿಗ್ಗೆ 10 ಗಂಟೆಗೆ ಜಗಳೂರು ತಾಲ್ಲೂಕಿನ ಸೊಕ್ಕೆ ಗ್ರಾಮದಲ್ಲಿ ಶ್ರೀ ಶಿರಡಿ ಸಾಯಿ ಬಾಬಾ ದೇವಸ್ಥಾನದ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮಧ್ಯಾಹ್ನ 1.30 ರಿಂದ ಜಗಳೂರು ಮತ್ತು ದಾವಣಗೆರೆ ತಾಲ್ಲೂಕುಗಳ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡುವರು. ಮಧ್ಯಾಹ್ನ 3.30ಕ್ಕೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ದಾವಣಗೆರೆ, ಹಾವೇರಿ ಮತ್ತು ಚಿತ್ರದುರ್ಗ ಜಿಲ್ಲೆ ಕೃಷಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸುವರು. ಸಂಜೆ 4.30ಕ್ಕೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನು ನಡೆಸುವರು. ಸಂಜೆ 5 ಗಂಟೆಗೆ ಪಕ್ಷದ ಕಚೇರಿಗೆ ಭೇಟಿ ನೀಡುವರು. ಸಂಜೆ 5.30ಕ್ಕೆ ಬೆಂಗಳೂರುಗೆ ತೆರಳುವರು.