ದಾವಣಗೆರೆ,ನ.20- ಎಲ್ಲಾ ಸಮುದಾಯ ಒಗ್ಗೂಡಿಸಿಕೊಂಡು ಹೋಗುವ ಮಠ ಯಾವುದಾದರೂ ಇದ್ದರೆ, ಅದು ಹೆಬ್ಬಾಳು ಮಠವಾಗಿದೆ ಎಂದು ಮಾಯಕೊಂಡ ಕ್ಷೇತ್ರದ ಶಾಸಕ ಕೆ.ಎಸ್.ಬಸವಂತಪ್ಪ ಶ್ಲ್ಯಾಘಿಸಿದರು.
ಮಾಯಕೊಂಡ ಕ್ಷೇತ್ರ ವ್ಯಾಪ್ತಿಯ ಕಂದಗಲ್ಲು ಗ್ರಾಮದಲ್ಲಿ ಶ್ರೀ ಮಹೇಶ್ವರ ಸ್ವಾಮಿ ಸಮುದಾಯ ಭವನ ನಿರ್ಮಾಣಕ್ಕೆ ಇಂದು ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.
ಈ ಭಾಗದಲ್ಲಿ ಸಮುದಾಯ ಭವನ ನಿರ್ಮಿಸಬೇಕೆಂದು ಗ್ರಾಮ ಸ್ಥರು ಬೇಡಿಕೆ ಇಟ್ಟಿದ್ದಾರೆ. ಗ್ರಾಮಗಳಲ್ಲಿ ಸಮುದಾಯ ನಿರ್ಮಾ ಣ ಮಾಡುವುದು ಅವಶ್ಯವಿದೆ. ಏಕೆಂ ದರೆ ಗ್ರಾಮದ ಜನರು ನಗರಗಳಿಗೆ ಹೋಗಿ ಮದುವೆ ಸಮಾರಂಭ, ಇನ್ನಿತರೆ ಕಾರ್ಯಕ್ರಮಗಳನ್ನು ಮಾಡಿ ದುಂದು ವೆಚ್ಚ ಮಾಡುವು ದಕ್ಕಿಂತ ಗ್ರಾಮೀಣ ಪ್ರದೇಶದಲ್ಲಿ ಸಮುದಾಯ ನಿರ್ಮಾಣ ಮಾಡಿದರೆ ದುಂದು ವೆಚ್ಚವನ್ನು ತಪ್ಪಿಸಬಹುದು. ಈ ನಿಟ್ಟಿನಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಚರ್ಚಿಸಿ ಸರ್ಕಾರದಿಂದ ಅನುದಾನ ಬಿಡುಗಡೆ ಮಾಡಿಸಿಕೊಡುವುದಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿದರು.
ಹೆಬ್ಬಾಳು ಮಠದ ಶ್ರೀ ಮಹಾಂತ ರುದ್ರೇಶ್ವರ ಸ್ವಾಮೀಜಿ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಭೂಮಿ ದಾನಿ, ನಿವೃತ್ತ ಶಿಕ್ಷಕ ಕೆ.ಎಂ.ಮಹೇಶ್ವರಪ್ಪ, ಗ್ರಾಮ ಪಂಚಾಯಿತಿ ಸದಸ್ಯ ಮಲ್ಲಿಕಾರ್ಜುನ ಗೌಡ್ರು, ಶ್ರೀಮಹಾಂತಸ್ವಾಮಿ ಸಮುದಾಯ ಭವನದ ಆಡಳಿತ ಮಂಡಳಿ ಅಧ್ಯಕ್ಷ ಬಿ.ರೇವಣಸಿದ್ದಪ್ಪ, ಉಪಾಧ್ಯಕ್ಷ ಕೆ.ಪಿ.ಪರಮೇಶ್ವರಪ್ಪ, ಕಾರ್ಯದರ್ಶಿ ಬಿ.ಸಿ.ಬಸವರಾಜಪ್ಪ, ಖಜಾಂಚಿ ಸಿ.ಜಿ.ಕಲ್ಲಪ್ಪ, ಸದಸ್ಯ ಮಲ್ಲಪ್ಪ ಸೇರಿದಂತೆ ಗ್ರಾಮಸ್ಥರು ಕಾ ರ್ಯಕ್ರಮದಲ್ಲಿ ಭಾಗವಹಿಸಿದ್ದರು.