ನಗರದಲ್ಲಿ ಇಂದು ಜಿಲ್ಲಾ ಮಟ್ಟದ ಮಾರ್ಗದರ್ಶಿ ಶಿಕ್ಷಕರ ಕಾರ್ಯಾಗಾರ

ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಜಿಲ್ಲಾ ಘಟಕ ಇವರ ಸಂಯುಕ್ತಾಶ್ರಯದಲ್ಲಿ ಇಂದು ಬೆಳಿಗ್ಗೆ 10.30 ಕ್ಕೆ  ರಾಷ್ಟ್ರೋತ್ಥಾನ ವಿದ್ಯಾಕೇಂದ್ರದ ಸಭಾಂಗಣದಲ್ಲಿ 31 ನೇ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶದ ಜಿಲ್ಲಾ ಮಟ್ಟದ ಮಾರ್ಗ ದರ್ಶಿ ಶಿಕ್ಷಕರ ಕಾರ್ಯಾಗಾರವನ್ನು ಏರ್ಪಡಿಸಲಾಗಿದೆ. ಕ್ಷೇತ್ರ ಶಿಕ್ಷಣಾಧಿಕಾರಿ ಪುಷ್ಪಲತಾ ಕಾರ್ಯಾ ಗಾರ ಉದ್ಘಾಟಿಸುವರು. ರಾಷ್ಟ್ರೋತ್ಥಾನ ವಿದ್ಯಾಕೇಂ ದ್ರದ ಕಾರ್ಯದರ್ಶಿ ಹೆಚ್.ಜಯಣ್ಣ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಿಜ್ಞಾನ ವಿಷಯ ಪರಿವೀಕ್ಷಕರಾದ ಆರ್.ಬಿ. ವಸಂತ ಕುಮಾರಿ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ದಾವಣಗೆರೆ ಘಟಕದ ಗೌರವಾಧ್ಯಕ್ಷ ಡಾ.ಜೆ.ಬಿ. ರಾಜು, ಖಜಾಂಚಿ ಅಂಗಡಿ ಸಂಗಪ್ಪ ಭಾಗವಹಿಸಲಿದ್ದಾರೆ. 

error: Content is protected !!