ಮಹಿಳೆಯರು ಮತ್ತು ಮಕ್ಕಳ ಮನವಿಗೆ ಸ್ಪಂದಿಸಿದ ಡಾ. ಪ್ರಭಾ ಎಸ್ಸೆಸ್ಸೆಂ
ದಾವಣಗೆರೆ, ನ. 20 – ನಗರದ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೊಸ ನಾಯಕನಹಳ್ಳಿ ಗ್ರಾಮದಲ್ಲಿ ಎಸ್.ಎಸ್. ಕೇರ್ ಟ್ರಸ್ಟ್ ವತಿಯಿಂದ ಟ್ರಸ್ಟ್‌ನ ಲೈಫ್ ಟ್ರಸ್ಟಿ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ಆರೋಗ್ಯ ಚಿಕಿತ್ಸಾ ಶಿಬಿರವನ್ನು ಈಚೆಗೆ ನಡೆಸಲಾಯಿತು.
ಪ್ರಭಾ ಅವರು ಆರೋಗ್ಯ ಶಿಬಿರಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಗ್ರಾಮದ ಮಹಿಳೆಯರು ಹಾಗೂ ವಿದ್ಯಾರ್ಥಿಗಳು ತಮ್ಮ ಗ್ರಾಮಕ್ಕೆ ಬಸ್ ಸೌಕರ್ಯ ಇರುವುದಿಲ್ಲ. ಇದರಿಂದ ನಗರಕ್ಕೆ ತೆರಳಲು ಒಂದು ಕಿಲೋಮೀಟರ್ ನಡೆದುಕೊಂಡು ಹೋಗಿ ಬಸ್ ಸೌಲಭ್ಯ ಪಡೆಯುವಂತಾಗಿದೆ. ಆದ್ದರಿಂದ ಬಸ್ ಸೌಲಭ್ಯ ಒದಗಿಸಲು ಸಹಾಯ ಮಾಡಬೇಕಾಗಿ ಮನವಿ ಮಾಡಿದ್ದರು.
ಮಹಿಳೆಯರು ಹಾಗೂ ಮಕ್ಕಳ ಮನವಿಗೆ ಸಕಾರಾತ್ಮವಾಗಿ ಸ್ಪಂದಿಸಿದ ಪ್ರಭಾ, ಈ ಮನವಿಯನ್ನು ಶಾಸಕ ಶಾಮನೂರು ಶಿವಶಂಕರಪ್ಪ ಅವರ ಗಮನಕ್ಕೆ ತಂದರು. ತಕ್ಷಣವೇ ಶಾಸಕರು ಸಂಬಂಧಪಟ್ಟ ಅಧಿಕಾರಿಗಳಿಗೆ ಗ್ರಾಮಕ್ಕೆ ಬಸ್ ಸೌಕರ್ಯ ಒದಗಿಸಲು ಸೂಚಿಸಿದರು. ಇದರ ಪರಿಣಾಮ ಇಂದಿನಿಂದ ಗ್ರಾಮಕ್ಕೆ ಸಾರಿಗೆ ಬಸ್ ಸೌಕರ್ಯ ಪ್ರಾರಂಭವಾಗಿದ್ದು, ಗ್ರಾಮಸ್ಥರು, ಮಹಿಳೆಯರು ಹಾಗೂ ವಿದ್ಯಾರ್ಥಿಗಳಲ್ಲಿ ಸಂತಸ ಮೂಡಿದೆ. ಈ ಸಂದರ್ಭ ದಲ್ಲಿ ಕೆಎಸ್ಸಾರ್ಟಿಸಿ ದಾವಣಗೆರೆ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಸಿ.ಈ.ಶ್ರೀನಿ ವಾಸಮೂರ್ತಿ, ಗ್ರಾಮದ ಮುಖಂಡ ದೇವೇಂದ್ರಪ್ಪ, ಗಿರೀಶ್, ರವಿಕುಮಾರ್, ಸಂತೋಷ್, ರವಿಕುಮಾರ್ ಕೆ.ಆರ್ ಮತ್ತಿತರರು ಉಪಸ್ಥಿತರಿದ್ದರು.