ದಾವಣಗೆರೆ, ನ. 22- ದೇವರಾಜ ಅರಸು ಬಡಾವಣೆಯಲ್ಲಿರುವ ಎಸ್.ಕೆ.ಪಿ. ವಿದ್ಯಾಪೀಠದ ಅಡಿಯಲ್ಲಿ ನಡೆಯುತ್ತಿರುವ ಆರ್.ವಿ.ಜಿ.ಕೆ. ಕನ್ನಡ ಮಾಧ್ಯಮ ಪ್ರೌಢಶಾಲೆ ಮತ್ತು ವಾಸವಿ ನರ್ಸರಿ ಹಿರಿಯ ಪ್ರಾಥಮಿಕ ಶಾಲೆಗಳ ಸಂಯುಕ್ತಾಶ್ರಯದಲ್ಲಿ ಕನ್ನಡ ರಾಜ್ಯೋತ್ಸವದ ಅಂಗವಾಗಿ ಕನ್ನಡ ನಾಡಿನ ಸಂಸ್ಕೃತಿಯನ್ನು ಬಿಂಬಿಸುವ ಸಾಂಪ್ರದಾಯಿಕ ವೇಷಭೂಷಣ ತೊಟ್ಟ ವಿದ್ಯಾರ್ಥಿಗಳು ಕನ್ನಡ ನುಡಿ ಜಾಥಾದಲ್ಲಿ ಭಾಗವಹಿಸಿದ್ದರು.
ಜಾಥಾಗೆ ಚಾಲನೆಯನ್ನು ದಾವಣಗೆರೆ ಉತ್ತರ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಷೇರ್ ಅಲಿ ಮತ್ತು ತಾಲ್ಲೂಕು ದೈಹಿಕ ಶಿಕ್ಷಣಾಧಿಕಾರಿಗಳು, ಆಡಳಿತಾಧಿಕಾರಿ ಡಾ. ಕುಮಾರ್, ಮುಖ್ಯ ಶಿಕ್ಷಕರಾದ ಕೆ.ಸಿ. ನಿರಂಜನ್, ಕೊಟ್ರೇಶ್ ಮತ್ತು ಇತರರು ಭಾಗವಹಿಸಿದ್ದರು.