ದಾವಣಗೆರೆ, ನ.24- ಜಗದ್ಗುರು ಜಯದೇವ ಮುರುಘರಾಜೇಂದ್ರ ವೈದ್ಯಕೀಯ ಮಹಾವಿದ್ಯಾಲಯ ದಿಂದ ಕನ್ನಡ ರಾಜ್ಯೋತ್ಸವ ನಿಮಿತ್ತ ನುಡಿ ತರಂಗ ಕಾರ್ಯಕ್ರಮವನ್ನು ನಾಳೆ ದಿನಾಂಕ 25ರಂದು ಬೆಳಿಗ್ಗೆ 11 ಗಂಟೆಗೆ ಕಾಲೇಜಿನ ಅಂಗರಚನಾ ಶಾಸ್ತ್ರ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲೆ ಡಾ. ಎಸ್. ಶುಕ್ಲಾ ಶೆಟ್ಟಿ ತಿಳಿಸಿದರು.
ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮ ದಲ್ಲಿ ವಿದ್ಯಾಲಯದ ಪ್ರಮುಖ ಪೋಷಕರಾದ ಶಾಸಕ ಶಾಮನೂರು ಶಿವಶಂಕರಪ್ಪ, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಭಾಗವಹಿಸುವರು. ಮುಖ್ಯ ಅತಿಥಿಗಳಾಗಿ ನಿವೃತ್ತ ಕನ್ನಡ ಪ್ರಾಧ್ಯಾಪಕ ಡಾ. ರಹಮತ್ ತರೀಕೆರೆ ಭಾಗವಹಿಸುವರು ಎಂದರು.
ಬಾಪೂಜಿ ವಿದ್ಯಾ ಸಂಸ್ಥೆ ಸದಸ್ಯ ಡಾ. ಸಂಪನ್ನ ಮುತಾಲಿಕ್, ವಿದ್ಯಾ ಸಂಸ್ಥೆ ನಿರ್ದೇಶಕ ಡಾ. ಎಂ.ಜಿ. ಈಶ್ವರಪ್ಪ ಅತಿಥಿಗಳಾಗಿ ಪಾಲ್ಗೊಳ್ಳುವರು. ಅದೇ ರೀತಿ ವಿಶೇಷ ಆಹ್ವಾನಿತರಾಗಿ ಸಾಮಾನ್ಯ ಆಡಳಿತ ವಿಭಾಗದ ನಿರ್ದೇಶಕ ಡಾ. ಎಂ.ಜಿ. ರಾಜಶೇಖರಪ್ಪ, ಸಂಶೋಧನೆ ಮತ್ತು ಅಭಿವೃದ್ಧಿ ವಿಭಾಗದ ನಿರ್ದೇಶಕ ಡಾ. ಮಂಜು ನಾಥ್ ಆಲೂರ್, ಆಡಳಿತ ವಿಭಾಗದ ನಿರ್ದೇಶಕ ಸತ್ಯ ನಾರಾಯಣ ಟಿ. ಭಾಗವಹಿಸುವರು ಎಂದು ತಿಳಿಸಿದರು. ಮಹಾವಿದ್ಯಾಲಯದ ಪ್ರಮುಖರಾದ ಅನುರೂಪ, ಗೋಪಾಲಕೃಷ್ಣ ಪತ್ರಿಕಾಗೋಷ್ಠಿಯಲ್ಲಿದ್ದರು.