ಜಿಲ್ಲಾ ವಕೀಲರ ಸಂಘದ ವತಿಯಿಂದ ಜಿಲ್ಲಾ ನ್ಯಾಯಾಲಯಗಳ ಸಂಕೀರ್ಣದಲ್ಲಿರುವ ವಕೀಲರ ಸಾಂಸ್ಕೃತಿಕ ಸಮುದಾಯ ಭವನದಲ್ಲಿ ಸಂವಿಧಾನ ದಿನಾಚರಣೆ ಅಂಗವಾಗಿ ಜಿಲ್ಲಾ ವಕೀಲರ ಸಂಘದಿಂದ ಉಪನ್ಯಾಸ ಮಾಲಿಕೆ 3 ರಾಷ್ಟ್ರ ನಿರ್ಮಾಣದಲ್ಲಿ ವಕೀಲರ ಪಾತ್ರ ವಿಷಯ ಕುರಿತು ಇಂದು ಮಧ್ಯಾಹ್ನ 3 ಗಂಟೆಗೆ ಕಾರ್ಯಕ್ರಮ ಆಯೋಜಿಸಲಾಗಿದೆ.
ರಾಜ್ಯದ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿ ಹೆಚ್.ಪಿ. ಸಂದೇಶ್ ಕಾರ್ಯಕ್ರಮವನ್ನು ಉದ್ಘಾಟಿಸಿ, ವಿಶೇಷ ಉಪನ್ಯಾಸ ನೀಡುವರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ರಾಜೇಶ್ವರಿ ಎನ್. ಹೆಗಡೆ, ಜಿಲ್ಲಾ ಕಾ.ಸೇಪ್ರಾ.ಸದಸ್ಯ ಕಾರ್ಯದರ್ಶಿ ಮಹಾವೀರ ಕರೆಣ್ಣವರ್ ಆಗಮಿಸಲಿದ್ದು, ಅಧ್ಯಕ್ಷತೆಯನ್ನು ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಲ್.ಹೆಚ್. ಅರುಣ್‍ಕುಮಾರ್ ವಹಿಸಲಿದ್ದಾರೆ