ದಾವಣಗೆರೆ, ನ. 29 – ಸುವರ್ಣ ಕರ್ನಾಟಕ ವೇದಿಕೆಯಿಂದ ನಗರದ ಶ್ರೀ ರಾಜೇಶ್ವರಿ ಬಡಾವಣೆ ಯಲ್ಲಿರುವ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಶಿಶುಪಾಲನಾ ಕೇಂದ್ರದಲ್ಲಿರುವ ಮಕ್ಕಳೊಂದಿಗೆ 68 ನೇ ಕನ್ನಡ ರಾಜ್ಯೋತ್ಸವವನ್ನು ತಾಯಿ ಭುವನೇಶ್ವರಿಯ ಭಾವ ಚಿತ್ರಕ್ಕೆ ಪೂಜೆ ಸಲ್ಲಿಸಿ, ನಾಡಗೀತೆ ಹಾಡಿ, ಮಕ್ಕಳಿಗೆ ಸಿಹಿ ಹಂಚುವ ಮೂಲಕ ಆಚರಿಸಲಾಯಿತು. ಈ ಸಂದರ್ಭದಲ್ಲಿ ವೇದಿಕೆಯ ಸಂಸ್ಥಾಪಕ ರಾಜ್ಯಾಧ್ಯಕ್ಷ ಸಂತೋಷ್ ಕುಮಾರ್ ಆರ್, ಶಾಲಾ ಸಿಬ್ಬಂದಿಗಳಾದ ರಾಜೇಶ್ವರಿ ಸ.ಶಿ., ಅನುಷಾ ಸ.ಶಿ., ಮಧುಬಾಯಿ ಸ.ಶಿ., ಹಾಗೂ ದಿವ್ಯ, ಸ.ಶಿ., ಮತ್ತು ಇತರರು ಭಾಗವಹಿಸಿದ್ದರು.
February 6, 2025