ದಾವಣಗೆರೆ, ನ. 30- ದಾಸಶ್ರೇಷ್ಠ ಶ್ರೀ ಕನಕದಾಸರ ಜಯಂತ್ಯುತ್ಸವ ಮೆರವಣಿಗೆಗೆ ವಿವಿಧ ಜಾನಪದ ಕಲಾತಂಡಗಳು ಮೆರಗು ತಂದವು. ಡೊಳ್ಳು, ವೀರಗಾಸೆ, ಗೊಂಬೆ ಕುಣಿತ, ಕೀಲು ಕುದುರೆ, ನಾಸಿಕ್ ಡೋಲು ಸೇರಿದಂತೆ ವಿವಿಧ ಕಲಾತಂಡಗಳು ಗಮನ ಸೆಳೆದವು. ನಗರ ದೇವತೆ ದುರ್ಗಾಂಬಿಕಾ ದೇವಸ್ಥಾನದ ಬಳಿ ಇರುವ ವೃತ್ತದಿಂದ ಹೊರಟ ಮೆರವಣಿಗೆಯು ವಿವಿಧ ಬೀದಿಗಳಲ್ಲಿ ಸಂಚರಿಸಿ, ನಂತರ ಪಿ.ಬಿ. ರಸ್ತೆಯಲ್ಲಿನ ಶ್ರೀ ಬೀರಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಮುಕ್ತಾಯಗೊಂಡಿತು.
ಮೆರವಣಿಗೆೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್, ಸಿಇಓ ಸುರೇಶ ಇಟ್ನಾಳ್, ಅಪರ ಜಿಲ್ಲಾಧಿಕಾರಿ ಪಿ.ಎನ್. ಲೋಕೇಶ್, ಮೇಯರ್ ವಿನಾಯಕ ಪೈಲ್ವಾನ್, ತಹಶೀಲ್ದಾರ್ ಅಶ್ವತ್ಥ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹ ನಿರ್ದೇಶಕ ರವಿಚಂದ್ರ ಮತ್ತಿತರರು ಭಾಗವಹಿಸಿದ್ದರು.