ಇಂದು ಮಕ್ಕಳಿಗಾಗಿ ವಿವಿಧ ಸ್ಪರ್ಧೆ

ಮಕ್ಕಳ ದಿನಾಚರಣೆ ಹಿನ್ನೆಲೆಯಲ್ಲಿ ಜಿಲ್ಲಾ ಬಾಲಭವನ ಸೊಸೈಟಿ ವತಿಯಿಂದ ನಗರದ ಜೆ.ಹೆಚ್ ಪಟೇಲ್ ಬಡಾವಣೆಯಲ್ಲಿರುವ ಆವರಣದಲ್ಲಿ ಇಂದು ಬೆಳಿಗ್ಗೆ 10 ಗಂಟೆಗೆ ಮಕ್ಕಳಿಗಾಗಿ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ.

ಮಕ್ಕಳ ದಿನಾಚರಣೆ ಹಿನ್ನೆಲೆಯಲ್ಲಿ ಚಿತ್ರಕಲೆ, ಜಾನಪದ ನೃತ್ಯ (ಗ್ರೂಪ್ ಡಾನ್ಸ್), ದೇಶ ಭಕ್ತಿಗೀತೆ ಹಾಗೂ ಮೆಮೋರಿ ಆಟ ಇತರೆ ಸ್ಪರ್ಧೆಗಳನ್ನು ಆಯೋಜಿಸಲಾಗಿದ್ದು, 6 ರಿಂದ 16 ವರ್ಷದೊಳಗಿನ ಮಕ್ಕಳು ಮಾತ್ರ ಭಾಗವಹಿಸಬಹುದಾಗಿದೆ. ವಿವರಕ್ಕೆ ದೂ.ಸಂ. 9964496242 ಸಂಪರ್ಕಿಸಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ವಾಸಂತಿ ಉಪ್ಪಾರ್ ತಿಳಿಸಿದ್ದಾರೆ.

error: Content is protected !!