ಹೋಟೆಲ್, ಗ್ಯಾರೇಜ್‍ಗಳಲ್ಲಿ ಬಾಲಕಾರ್ಮಿಕ ಪದ್ದತಿ ನಿಷೇಧ ಜಾಗೃತಿ

ದಾವಣಗೆರೆ, ಡಿ.1- ಪ್ಯಾನ್ ಇಂಡಿಯಾ ರಕ್ಷಣೆ ಮತ್ತು ಪುನರ್ವಸತಿ ಆಂದೋಲನದ ಅಂಗವಾಗಿ ದಾವಣಗೆರೆ ನಗರದಲ್ಲಿ ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆ ಹಾಗೂ ಬಾಲ್ಯಾವಸ್ಥೆ ಮತ್ತು ಕಿಶೋರಾವಸ್ಥೆ (ನಿಷೇಧ ಮತ್ತು ನಿಯಂತ್ರಣ) ತಿದ್ದುಪಡಿ ಕಾಯ್ದೆ ಕುರಿತು ವಿವಿಧ ಅಂಗಡಿ, ಹೋಟೆಲ್, ಗ್ಯಾರೇಜ್ ಹಾಗೂ ವಾಣಿಜ್ಯ ಸಂಸ್ಥೆಗಳಿಗೆ ಭೇಟಿ ನೀಡಿ, ಅಧಿಕಾರಿಗಳು ಬಾಲ ಹಾಗೂ ಕಿಶೋರಾವಸ್ಥೆ ಕಾರ್ಮಿಕರ ತಪಾಸಣೆ ನಡೆಸಿ, ಮಾಲೀಕರಿಗೆ ಕರಪತ್ರ ಮತ್ತು ಸ್ಟೀಕರ್ಸ್ ನೀಡಿ ಜಾಗೃತಿ ಮೂಡಿಸಿದರು. 

ಕಾರ್ಯಾಚರಣೆಯಲ್ಲಿ ಕಾರ್ಮಿಕ ನಿರೀಕ್ಷಕರಾದ ರಾಜಶೇಖರ ಹಿರೇಮಠ್ ಮತ್ತು ರಾಜಪ್ಪ.ಟಿ, ಯೋಜನಾ ನಿರ್ದೇಶಕ ಪ್ರಸನ್ನ ಇ.ಎನ್ ಉಪಸ್ಥಿತಿರಿದ್ದರು.

error: Content is protected !!