ದಾವಣಗೆರೆ, ಡಿ.3- ಅಖಿಲ ಕರ್ನಾಟಕ ಸರ್ವಜ್ಞ ಸಾಂಸ್ಕೃತಿಕ ಕಲಾ ವೇದಿಕೆ ವತಿಯಿಂದ ಕನ್ನಡದ ಹಿರಿಯ ನಟಿ ಡಾ.ಲೀಲಾವತಿ ಅವರು ಶೀಘ್ರವೇ ಗುಣಮುಖರಾಗಲಿ ಎಂದು ಹಾರೈಸಿ ನಾಡಿದ್ದು ದಿನಾಂಕ 5ರ ಮಂಗಳವಾರ ದುರ್ಗಾಂಬಿಕ ದೇವಿಗೆ ವಿಶೇಷ ಪೂಜೆ ಸಲ್ಲಿಸಲಾಗುವುದು ಎಂದು ವೇದಿಕೆಯ ರಾಜಾಧ್ಯಕ್ಷ ಕೆ.ವೈ.ತಿಪ್ಪೇಸ್ವಾಮಿ ತಿಳಿಸಿದ್ದಾರೆ.
ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಿಟುವಳ್ಳಿಯ ಶ್ರೀ ದುರ್ಗಾಂಬಿಕಾ ದೇವಸ್ಥಾನದಲ್ಲಿ ಅಂದು ಬೆಳಗ್ಗೆ 11ಕ್ಕೆ ಈ ಪೂಜೆ ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ಎಸ್. ಎಸ್. ಕೇರ್ ಟ್ರಸ್ಟ್ ನ ಅಜೀವ ಸದಸ್ಯೆ ಪ್ರಭಾ ಮಲ್ಲಿಕಾರ್ಜುನ್, ಪಾಲಿಕೆ ಸದಸ್ಯೆ ಸವಿತಾ ಗಣೇಶ್ ಹುಲ್ಮನಿ, ಜಿ.ಬಿ.ವಿನಯ್ ಕುಮಾರ್, ದುರುಗೇಶ್, ಯೋಗೇಶ್ ಇತರರು ಆಗಮಿಸಲಿದ್ದಾರೆ ಎಂದು ಹೇಳಿದರು. ದಾವಣಗೆರೆ ಜಿಲ್ಲಾಧ್ಯಕ್ಷ ಕೆ.ಆರ್. ಬಸವರಾಜಪ್ಪ, ಚಿತ್ರನಟ ಜಿ.ಹರೀಶ್ ಪತ್ರಿಕಾಗೋಷ್ಠಿಯಲ್ಲಿದ್ದರು.