ದಾವಣಗೆರೆ, ಡಿ.3- ಪ್ರಸಕ್ತ ಸಾಲಿನಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ `ಜೀವಮಾನ ಸಾಧನೆ’ ಹಾಗೂ `ಕರ್ನಾಟಕ ಕ್ರೀಡಾರತ್ನ’ ಪ್ರಶಸ್ತಿಗಾಗಿ, ಕ್ರೀಡಾ ಕ್ಷೇತ್ರದಲ್ಲಿ ಅಸಾಧಾರಣ ಪ್ರತಿಭೆಯನ್ನು ತೋರಿರುವ ರಾಜ್ಯದ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಅವಧಿಯನ್ನು ಇದೇ ದಿನಾಂಕ 8ರವರೆಗೆ ವಿಸ್ತರಿಸಲಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಜಯಲಕ್ಷ್ಮೀ ಬಾಯಿ ತಿಳಿಸಿದ್ದಾರೆ.
January 12, 2025