ದಾವಣಗೆರೆ, ಡಿ. 7- ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಮೋಟಾರ್ ಡ್ರೈವಿಂಗ್ ಸ್ಕೂಲ್ ಮಾಲೀಕರ ಸಂಘಗಳ ಒಕ್ಕೂಟದಿಂದ ನಾಳೆ ದಿನಾಂಕ 8 ರ ಶುಕ್ರವಾರ ಬೆಳಿಗ್ಗೆ 9 ಕ್ಕೆ ಬೆಳಗಾವಿ ಸುವರ್ಣ ಸೌಧಕ್ಕೆ ಪಾದಯಾತ್ರೆ ಮೂಲಕ ತೆರಳಿ, ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ ಎಂದು ಒಕ್ಕೂಟದ ಜಿಲ್ಲಾಧ್ಯಕ್ಷ ಫಯಾಜ್ ಅಹಮದ್ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು. ರಾಜ್ಯದಲ್ಲಿ ಸುಮಾರು 2000 ಮೋಟಾರು ಡ್ರೈವಿಂಗ್ ಸ್ಕೂಲ್‌ಗಳಿದ್ದು, ಇವುಗಳನ್ನೇ ನಂಬಿಕೊಂಡು ಸಾವಿರಾರು ಕುಟುಂಬಗಳು ಜೀವನ ನಡೆಸು ತ್ತಿವೆ. ಆದರೆ ಕೇಂದ್ರ ಸರ್ಕಾರ 2022 ರಿಂದ ಹೊಸ ನೀತಿ ಜಾರಿ ಮಾಡಿರುವುದು ನೋವಿನ ಸಂಗತಿಯಾಗಿದೆ. ಕೆಲವು ರಾಜ್ಯಗಳಲ್ಲಿ ಇವುಗಳನ್ನು ಅನುಷ್ಠಾನಗೊಳಿಸದೇ ಆ ರಾಜ್ಯದ ಜನರ ಅನುಕೂಲಕ್ಕೆ ತಕ್ಕಂತೆ ಕಾನೂನು ರೂಪಿಸಿಕೊಂಡಿವೆ. ಅದೇ ರೀತಿ ಕರ್ನಾಟಕಕ್ಕೆ ಹೊಸ ನೀತಿ ತಂದರೆ ನಮ್ಮ ಮೋಟಾರ್ ಡ್ರೈವಿಂಗ್ ಸ್ಕೂಲ್‌ಗಳು ಸಂಕಷ್ಟಕ್ಕೆ ಒಳಗಾಗಲಿವೆ ಎಂದರು. ಈಶ್ವರ್, ನಾಗರಾಜ್, ಹೆಚ್.ಹೆಚ್. ಅಮೀರ್, ತಬರೇಜ್ ಮತ್ತಿತರರು ಉಪಸ್ಥಿತರಿದ್ದರು.
January 16, 2025