ದಾವಣಗೆರೆ, ಡಿ. 7- ಕರ್ನಾಟಕ ಪ್ರದೇಶ ಆರ್ಯ ಈಡಿಗರ ಸಂಘದ ಅಮೃತ ಮಹೋತ್ಸವ (75 ನೇ ವಾರ್ಷಿಕೋತ್ಸವ) ಹಾಗೂ ಈಡಿಗ, ನಿಲ್ಲವ, ಪೂಜಾರಿ, ದೀವರ, ನಾಮಧಾರಿ ಸೇರಿದಂತೆ 26 ಪಂಗಡಗಳ ಬೃಹತ್ ಜಾಗೃತ ಸಮಾವೇಶವನ್ನು ಇದೇ ದಿನಾಂಕ 10 ರಂದು ಬೆಳಿಗ್ಗೆ 11 ಕ್ಕೆ ಬೆಂಗಳೂರು ಅರಮನೆ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಆರ್ಯ ಈಡಿಗ ಸಂಘದ ಪ್ರಧಾನ ಕಾರ್ಯದರ್ಶಿ ಎ. ನಾಗರಾಜ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಸಮುದಾಯದ ಮಠಾಧೀಶರಾದ ಸೋ ಲೂರಿನ ವಿಖ್ಯಾತಾನಂದ ಸ್ವಾಮೀಜಿ, ನಿಟ್ಟೂರಿನ ರೇಣುಕಾನಂದ ಸ್ವಾಮೀಜಿ ಸೇರಿದಂತೆ ಇತರೆ ಮಠಾಧೀಶರು ಆಗಮಿಸಲಿದ್ದಾರೆ. ಕರ್ನಾಟಕ ಪ್ರದೇಶ ಆರ್ಯ ಈಡಿಗರ ಸಂಘದ ಅಧ್ಯಕ್ಷ ಡಾ.ಎಂ. ತಿಮ್ಮೇಗೌಡರ ಅಧ್ಯಕ್ಷತೆಯಲ್ಲಿ ಈ ಕಾರ್ಯಕ್ರಮ ನಡೆಯಲಿದೆ ಎಂದು ಹೇಳಿದರು.
ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಶಿಕ್ಷಣ ಸಚಿವ ಮಧು ಬಂಗಾರಪ್ಪ, ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಮತ್ತು ಇತರರು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂದರು.
ಜಿಲ್ಲಾ ಆರ್ಯ ಈಡಿಗರ ಸಂಘ, ಆರ್ಯ ಈಡಿಗರ ಮಹಿಳಾ ಸಂಘ, ಹರಿಹರ, ಹೊನ್ನಾಳಿ, ಜಗಳೂರು ಆರ್ಯ ಈಡಿಗರ ಸಂಘ, ರೇಣು ಕಾಂಬ ಕ್ರೆಡಿಟ್ ಕೋ ಆಪ್ ಸೊಸೈಟಿ ಇವರೊಂ ದಿಗೆ ಜಿಲ್ಲೆಯಿಂದ ಸಾವಿರಾರು ಸಂಖ್ಯೆಯಲ್ಲಿ ಸಮುದಾಯದ ಜನರು ಸಮಾವೇಶದಲ್ಲಿ ಭಾಗ ವಹಿಸಲಿದ್ದಾರೆ ಎಂದು ಅವರು ವಿವರಿಸಿದರು.
ಸುದ್ದಿಗೋಷ್ಠಿಯಲ್ಲಿ ಸಮಾಜದ ಮುಖಂಡರಾದ ಹೆಚ್. ಶಂಕರ್, ಈ. ದೇವೇಂದ್ರಪ್ಪ, ರವೀಂದ್ರಬಾಬು, ಎಸ್. ಭರಮಪ್ಪ, ಕೃಷ್ಣಮೂರ್ತಿ, ಲೋಕಣ್ಣ, ಪ್ರಕಾಶ್, ತಿಪ್ಪೇಸ್ವಾಮಿ, ರಾಮದಾಸ್, ಗೋವಿಂದರಾಜು, ಬಕ್ಕಣ್ಣ, ಜಯಪ್ರಕಾಶ್, ರಘು ಮತ್ತಿತರರಿದ್ದರು.