ದಾವಣಗೆರೆ, ಡಿ.10- ಕಲ್ಯಾಣ ಕರ್ನಾಟಕ ಪ್ರದೇಶದ ನಾಗರಿಕ ಪೊಲೀಸ್ (CPC)-454 ಹುದ್ದೆಗಳ ನೇಮಕಾತಿ ಸಂಬಂಧ ಭಾನುವಾರ ನಗರದ 7 ಪರೀಕ್ಷಾ ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆ ನಡೆಯಿತು.
ಪೊಲೀಸ್ ಅಧೀಕ್ಷಕಿ ಶ್ರೀಮತಿ ಉಮಾ ಪ್ರಶಾಂತ್ ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿ, ಪರೀಕ್ಷಾ ಸಂಬಂಧ ಕರ್ತವ್ಯದಲ್ಲಿದ್ದ ಅಧಿಕಾರಿ, ಸಿಬ್ಬಂದಿಗಳಿಗೆ ಸೂಕ್ತ ಸಲಹೆ-ಸೂಚನೆ ನೀಡಿದರು.
ಜಿಲ್ಲೆಯ ಪರೀಕ್ಷಾ ಕೇಂದ್ರಗಳಿಗೆ ಹಂಚಿಕೆಯಾಗಿದ್ದ ಒಟ್ಟು 3740 ಪರೀಕ್ಷಾ ಅಭ್ಯರ್ಥಿಗಳಲ್ಲಿ 2474 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. 1266 ಅಭ್ಯರ್ಥಿಗಳು ಗೈರು ಹಾಜರಾಗಿರುತ್ತಾರೆ.