ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್, ದೇವನಗರಿ ತಾಲ್ಲೂಕು ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ದಾವಣಗೆರೆ-ಡಿ-ವಲಯ ಇವರುಗಳ ಸಂಯುಕ್ತಾಶ್ರಯದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮವು ನಿಟ್ಟುವಳ್ಳಿಯ ಚಿದಂಬರ ಸಭಾ ಭವನದಲ್ಲಿ ಇಂದು ನಡೆಯಲಿದೆ.
ಬೆಳಿಗ್ಗೆ 7 ಗಂಟೆಗೆ ಪೂಜಾ ಕಾರ್ಯಕ್ರಮ, ಬೆಳಿಗ್ಗೆ 11 ಗಂಟೆಗೆ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದೆ. ದಿವ್ಯ ಸಾನ್ನಿಧ್ಯವನ್ನು ಶ್ರೀ ಓಂಕಾರ ಶಿವಾಚಾರ್ಯ ಸ್ವಾಮೀಜಿ ವಹಿಸುವರು.
ಅಧ್ಯಕ್ಷತೆಯನ್ನು ಪಾಲಿಕೆ ಸದಸ್ಯ ಕೆ.ಎಂ. ವೀರೇಶ್ ವಹಿಸುವರು. ಕಾರ್ಯಕ್ರಮವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೇ ಬಿ.ಸಿ. ಟ್ರಸ್ಟ್ನ ಹಿರಿಯ ಜಿಲ್ಲಾ ನಿರ್ದೇಶಕ ಲಕ್ಷ್ಮಣ ಎಂ. ಉದ್ಘಾಟಿಸುವರು.
ಮುಖ್ಯ ಅತಿಥಿಗಳಾಗಿ ಮೋಹನ ದೀಕ್ಷಿತ್, ಶ್ರೀಮತಿ ಮಂಜುಳಾ ಜಿ.ವಿ., ಶ್ರೀಮತಿ ಉಮಾಪ್ರಕಾಶ್, ಅಣಬೇರು ಮಂಜಣ್ಣ, ಮುಕುಂದಪ್ಪ ಆಗಮಿಸುವರು.