ಜಾಗತಿಕ ಲಿಂಗಾಯತ ಮಹಾಸಭಾ ದಾವಣಗೆರೆ ಜಿಲ್ಲಾ ಮಹಿಳಾ ಘಟಕದ ಉದ್ಘಾಟನಾ ಸಮಾರಂಭವು ಇಂದು ಬೆಳಿಗ್ಗೆ 11 ಗಂಟೆಗೆ ಬಸವ ಬಳಗದ ಸಭಾಂಗಣದಲ್ಲಿ ನಡೆಯಲಿದೆ.
ಪಾಂಡೋಮಟ್ಟಿ – ಕಮ್ಮತ್ತಹಳ್ಳಿ ವಿರಕ್ತಮಠದ ಡಾ. ಗುರುಬಸವ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಜಾಗತಿಕ ಲಿಂಗಾಯತ ಮಹಾಸಭಾದ ರಾಜ್ಯ ಮಹಿಳಾ ಸಂಚಾಲಕರಾದ ಮುಕ್ತಾ ಕಾರ್ಯಕ್ರಮ ಉದ್ಘಾಟಿಸಲಿದ್ದು, ಬಸವ ಬಳಗದ ಅಧ್ಯಕ್ಷ ಎ.ಹೆಚ್. ಹುಚ್ಚಪ್ಪ ಮಾಸ್ತರ್ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಬೆಂಗಳೂರು ವಿವಿ ನಿವೃತ್ತ ಪ್ರಾಧ್ಯಾಪಕ ಡಾ.ಹೆಚ್.ಎಂ. ಸೋಮಶೇಖರಪ್ಪ, ಮಹಾಸಭಾ ರಾಜ್ಯ ಕಾರ್ಯದರ್ಶಿ ಮಹಾಂತೇಶ್ ಅಗಡಿ ಭಾಗವಹಿಸಲಿದ್ದಾರೆ.