ದಾವಣಗೆರೆ, ಡಿ.12- ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ವಕೀಲರ ಸಂರಕ್ಷಣಾ ಕಾಯ್ದೆಯನ್ನು ಬೆಳಗಾವಿ ಅಧಿವೇಶನದಲ್ಲಿ ಜಾರಿ ಮಾಡಿದ ಸರ್ಕಾರಕ್ಕೆ ಜಿಲ್ಲಾ ಸಾಮಾಜಿಕ ನ್ಯಾಯ ಸಮಿತಿ ಅಭಿನಂದಿಸಿದೆ.
ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವಕೀಲ ಎಸ್.ಪರಮೇಶ್, ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು 6ನೇ ಗ್ಯಾರಂಟಿಯಾಗಿ ವಕೀಲರ ಸಂರಕ್ಷಣಾ ಕಾಯ್ದೆ ಜಾರಿಗೆ ತರುವುದಾಗಿ ಭರವಸೆ ನೀಡಿದ್ದರು.
ಅದರಂತೆ ಇದೀಗ ಜಾರಿಗೆ ತಂದಿದ್ದಾರೆ ಎಂದು ಹೇಳಿದರು. ವಕೀಲರು ನಿರಂತರವಾಗಿ ಹಲ್ಲೆಗೊಳಲಾಗುತ್ತಿದ್ದರು.
ಈ ಕಾಯ್ದೆಯಿಂದಾಗಿ ವಕೀಲರಿಗೆ ರಕ್ಷಣೆ ಸಿಕ್ಕಿದೆ ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಎನ್.ಎಂ. ಆಂಜನೇಯ ಗುರೂಜಿ, ಕೆ.ಕೆ. ರಂಗಸ್ವಾಮಿ, ಬಾಬು ಪಿ. ಗೋಸಾಯಿ ಉಪಸ್ಥಿತರಿದ್ದರು.