ದಾವಣಗೆರೆ, ಡಿ. 13- ಬೆಳಗಾವಿ ಜಿಲ್ಲೆಯ ಹೊಸ ವಂಟಮುರಿ ಗ್ರಾಮ ದಲ್ಲಿ ಮಹಿಳೆಯನ್ನು ಬೆತ್ತಲೆಗೊಳಿಸಿ, ಮೆರವಣಿಗೆ ಮಾಡಿ, ಥಳಿಸಿರುವ ಅಮಾನವೀಯ ಘಟನೆಯನ್ನು ಎಐಎಂಎಸ್ಎಸ್ ತೀವ್ರವಾಗಿ ಖಂಡಿಸಿದೆ.
ಬೆತ್ತಲೆಗೊಳಿಸಿದ್ದ ಮಹಿಳೆಯ ಮಗ ಮತ್ತು ಅದೇ ಜಾತಿಯ ಹುಡುಗಿ ಪರಸ್ಪರ ಪ್ರೀತಿಸಿ ಓಡಿ ಹೋಗಿದ್ದರು. ಇದರಿಂದ ರೊಚ್ಚಿಗೆದ್ದ ಯುವತಿಯ ಮನೆಯವರು ಯುವಕನ ತಾಯಿಯನ್ನು ವಿವಸ್ತ್ರಗೊಳಿಸಿ ಬೀದಿಗಳಲ್ಲಿ ಓಡಾಡಿಸಿ ನಂತರ ವಿದ್ಯುತ್ ಕಂಬಕ್ಕೆ ಕಟ್ಟಿ ಥಳಿಸಿದ್ದಾರೆ. ಆಕೆಯ ಮನೆಯನ್ನೂ ಸಹ ಧ್ವಂಸ ಮಾಡಲಾಗಿದೆ. ಈ ಪ್ರಕರಣವನ್ನು ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ (ಎಐಎಂಎಸ್ಎಸ್) ತೀವ್ರವಾಗಿ ಖಂಡಿಸಿದೆ.
ಇಡೀ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಾಗಿದೆ. ಇದರಲ್ಲಿ ಭಾಗಿಯಾದ ಹಲವರನ್ನು ಬಂಧಿಸಲಾಗಿದೆ. ಉಳಿದವರನ್ನು ಸರ್ಕಾರ ಕೂಡಲೇ ಬಂಧಿಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಸಂತ್ರಸ್ತ ಮಹಿಳೆಗೆ ಭದ್ರತೆ ಮತ್ತು ನ್ಯಾಯ ಒದಗಿಸಿ ಕೊಡಬೇಕೆಂದು ಒತ್ತಾಯಿಸಿದ್ದಾರೆ.