ದಾವಣಗೆರೆ, ಡಿ. 13 – ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ವತಿಯಿಂದ ಜಿಲ್ಲೆಯ ಸಾರಥಿ, ಕುರುಬರಹಳ್ಳಿ 1ನೇ ಹಂತದ ಕೈಗಾರಿಕಾ ಪ್ರದೇಶದಲ್ಲಿ ಉದ್ದಿಮೆದಾರರಿಂದ ಕೈಗಾರಿಕೆ ಸ್ಥಾಪನೆಗೆ ಜಮೀನು ಹಂಚಿಕೆಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸುವ ಉದ್ದಿಮೆದಾರರು ನಗರದ ಕರೂರು ಕೈಗಾರಿಕಾ ಪ್ರದೇಶದಲ್ಲಿನ ಜಿಲ್ಲಾ ಕೈಗಾರಿಕಾ ಕೇಂದ್ರದಲ್ಲಿ ಅರ್ಜಿ ನಮೂನೆಯನ್ನು ಪಡೆಯಬೇಕು. ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಅದೇ ಕಚೇರಿಗೆ ಸಲ್ಲಿಸಬೇಕು ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.