ವಿವಿಧ ಬೇಡಿಕೆಗಳನ್ನು ಈಡೇರಿಸು ವಂತೆ ಒತ್ತಾಯಿಸಿ ಅಖಿಲ ಭಾರತ ಔಷಧ ಮಾರಾಟ ಪ್ರತಿನಿಧಿಗಳ ಫೆಡರೇಶನ್ ಕರೆ ನೀಡಿರುವ ದೇಶವ್ಯಾಪಿ ಮುಷ್ಕರವನ್ನು ಕರ್ನಾಟಕ ರಾಜ್ಯ ಔಷಧ ಮಾರಾಟ ಪ್ರತಿನಿಧಿಗಳು ಕೆಲಸವನ್ನು ಬಹಿಷ್ಕರಿಸಿ ಪ್ರತಿಭಟನೆ ನಡೆಸಲಿದ್ದಾರೆ.
ಇಂದು ಬೆಳಿಗ್ಗೆ 10.30 ಕ್ಕೆ ಮಹಾನಗರ ಪಾಲಿಕೆ ಮುಂಭಾಗದಲ್ಲಿ ಪ್ರತಿಭಟನಾ ಧರಣಿ ನಡೆಸಲಾಗುವುದು ಎಂದು ಸಂಘಟನೆ ಜಿಲ್ಲಾ ಕಾರ್ಯದರ್ಶಿ ಹೆಚ್.ಎಂ. ಲೋಹಿತಾಶ್ವ ತಿಳಿಸಿದ್ದಾರೆ.