ಸಿಹಿ ಪ್ರಕಾಶನದ ವತಿಯಿಂದ ಇಂದು ಬೆಳಿಗ್ಗೆ 10.30ಕ್ಕೆ ವನಿತಾ ಸಮಾಜದಲ್ಲಿ ಕನ್ನಡ ರಾಜ್ಯೋತ್ಸವ ಹಾಗೂ ಸಿಹಿ ಪ್ರಕಾಶನದ 19ನೇ ವಾರ್ಷಿಕೋತ್ಸವ ಹಾಗೂ ಸನ್ಮಾನ ಸಮಾರಂಭ ಏರ್ಪಡಿಸಲಾಗಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಹಿರಿಯ ಕವಯಿತ್ರಿ ಶ್ರೀಮತಿ ಸತ್ಯಭಾಮ ಮಂಜುನಾಥ್ ನೆರವೇರಿಸಲಿದ್ದು, ಅಧ್ಯಕ್ಷತೆಯನ್ನು ಹಿರಿಯ ಸಾಹಿತಿ ಪ್ರೊ. ಬಿ.ಬಿ.ಪಾಟೀಲ ವಹಿಸುವರು.
ಮುಖ್ಯ ಅತಿಥಿಗಳಾಗಿ ಬೆಂಗಳೂರಿನ ಹಾಸ್ಯ ಸಾಹಿತಿಗಳಾದ ಕೋ.ಲ.ರಂಗನಾಥರಾವ್, ಎಸ್.ಎಸ್.ಪಡಶೆಟ್ಟಿ, ಕನ್ನಡಪರ ಹೋರಾಟಗಾರ ಬಂಕಾಪುರದ ಚನ್ನಬಸಪ್ಪ ಆಗಮಿಸುವರು. ಇದೇ ಸಂದರ್ಭದಲ್ಲಿ ಹಿರಿಯ ಸಾಹಿತಿ ಮಳಲಕೆರೆ ಗುರುಮೂರ್ತಿ ಅವರನ್ನು ಸನ್ಮಾನಿಸಲಾಗುವುದು.