ಬೆಂಗಳೂರು ಬಸವೇಶ್ವರ ನಗರ ವಾಸಿ, ಹೆಚ್. ಕೆ. ಶೇಖರಪ್ಪ ಇವರ ಪತ್ನಿ ಶ್ರೀಮತಿ ದ್ರಾಕ್ಷಾಯಣಮ್ಮ ಇವರು ದಿನಾಂಕ 23-12-2023ರ ಶನಿವಾರ ರಾತ್ರಿ 9.30 ಕ್ಕೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ 83 ವರ್ಷ ವಯಸ್ಸಾಗಿತ್ತು. ಇಬ್ಬರು ಪುತ್ರರು, ಓರ್ವ ಪುತ್ರಿ, ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 24-12-2023ರ ಭಾನುವಾರ ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿನ ರಾಜಾಜಿ ನಗರದಲ್ಲಿರುವ ಹರಿಶ್ಚಂದ್ರ ಘಾಟ್ ಎದುರುಗಡೆ ಇರುವ ವೀರಶೈವ ರುದ್ರಭೂಮಿಯಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
August 27, 2024