ದಾವಣಗೆರೆ, ಡಿ.25- ಜಿಲ್ಲಾ ಉಪ್ಪಾರ ಸಂಘದಿಂದ 2022-23 ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಶೇ. 85 ಕ್ಕಿಂತ ಹೆಚ್ಚು ಅಂಕ ಗಳಿಸಿದ ಜಿಲ್ಲೆಯ ಜಗಳೂರು, ಹರಿಹರ, ಚನ್ನಗಿರಿ, ದಾವಣಗೆರೆ, ಹೊನ್ನಾಳಿ ತಾಲ್ಲೂಕುಗಳ ಪ್ರತಿಭಾವಂತ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಇದೇ ದಿನಾಂಕ 31 ರ ಭಾನುವಾರ ಬೆಳಿಗ್ಗೆ 11 ಗಂಟೆಗೆ ಕುವೆಂಪು ಕನ್ನಡ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಉಪ್ಪಾರ ನೌಕರರ ಸಂಘದ ಅಧ್ಯಕ್ಷ ಎನ್.ಎಸ್. ಚಂದ್ರಪ್ಪ, ಕರ್ನಾಟಕ ರಾಜ್ಯ ಉಪ್ಪಾರ ಸಂಘದ ಗೌರವಾಧ್ಯಕ್ಷ ಎಸ್.ಬಸವರಾಜಪ್ಪ ತುರ್ಚಘಟ್ಟ, ಜಿಲ್ಲಾ ಭಗೀರಥ ಉಪ್ಪಾರ ಸಂಘದ ಗೌರವಾಧ್ಯಕ್ಷ ಹೆಚ್.ತಿಪ್ಪಣ್ಣ ತುರ್ಚಘಟ್ಟ ತಿಳಿಸಿದ್ದಾರೆ. ವಿವರಕ್ಕೆ ಎಂ.ಸಿ. ರಮೇಶ್ (94485 67515), ರಾಮಪ್ಪ (79750 78895, 94492 04792) ಅವರನ್ನು ಸಂಪರ್ಕಿಸಬಹುದು.
January 12, 2025