ದಾವಣಗೆರೆ, ಡಿ. 28 – ಹಿರಿಯ ಕ್ರೀಡಾಪಟು ಅಂತರರಾಷ್ಟ್ರೀಯ ತೀರ್ಪುಗಾರರಾದ ಏಕಲವ್ಯ ಪ್ರಶಸ್ತಿ ವಿಜೇತ ಹೆಚ್.ದಾದಾಪೀರ್ ಅವರು ನವದೆಹಲಿಯಲ್ಲಿ ಇತ್ತೀಚೆಗೆ ನಡೆದ ಖೇಲೋ ಇಂಡಿಯಾ ಪ್ಯಾರಾ ಪವರ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ತೀರ್ಪುಗಾರರಾಗಿ ಭಾಗವಹಿಸಿ ‘ಅತ್ಯುತ್ತಮ ಶಿಸ್ತು ತೀರ್ಪುಗಾರ’ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಹೆಚ್. ದಾದಾಪೀರ್ ಅವರಿಗೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್, ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀಮತಿ ಉಮಾ ಪ್ರಶಾಂತ್, ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಡಿವೈಎಸ್ಪಿ ಪಿ.ಬಿ.ಪ್ರಕಾಶ್, ಗ್ರೂಪ್ ಆಫ್ ಐರನ್ ಗೇಮ್ಸ್ ಅಭಿನಂದಿಸಿದ್ದಾರೆ.
February 5, 2025