ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿ, ದಾವಣಗೆರೆ ಇವರ ಸಂಯುಕ್ತಾಶ್ರಯದಲ್ಲಿ ಇಂದು ಬೆಳಿಗ್ಗೆ 10.30ಕ್ಕೆ ನಗರದ ದೇವರಾಜ ಅರಸು ಬಡಾವಣೆಯ ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ಬಾಲ ಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಪದ್ಧತಿ ನಿರ್ಮೂಲನೆ ಕುರಿತು ಎಸ್ಸಿಪಿ-ಟಿಎಸ್ಪಿ ಯೋಜನೆಯಡಿ ದಾವಣಗೆರೆ ನಗರ ವ್ಯಾಪ್ತಿಯಲ್ಲಿ ಹಾಗೂ ಹರಿಹರ ಇಟ್ಟಗಿ ಭಟ್ಟಿ ಕ್ಷೇತ್ರಗಳಲ್ಲಿ ಮತ್ತು ಎಸ್ಸಿ-ಎಸ್ಟಿ ಕಾಲೋನಿಗಳಲ್ಲಿ ಆಟೋ ಪ್ರಚಾರದ ಮೂಲಕ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷ ಎನ್. ರಾಜೇಶ್ವರಿ ಹೆಗಡೆ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಮ. ಕರೆಣ್ಣವರ, ಸಹಾಯಕ ಕಾರ್ಮಿಕ ಆಯುಕ್ತ ಎಸ್.ಆರ್. ವೀಣಾ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಕೆ. ನಾಗರಾಜ್, ಕಾರ್ಮಿಕ ಅಧಿಕಾರಿ ಜಿ. ಇಬ್ರಾಹಿಂ ಸಾಬ್, ವಕೀಲರ ಸಂಘದ ಅಧ್ಯಕ್ಷ ಎಲ್.ಹೆಚ್. ಅರುಣ್ ಕುಮಾರ್ ಭಾಗವಹಿಸುವರು.
January 11, 2025