ದಾವಣಗೆರೆ, ಜ. 8 – ದಾವಣಗೆರೆ ವಿಭಾಗದ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾದ ಎಂ.ಎಸ್. ಕೌಲಾಪೂರೆ ಅವರು ನ್ಯಾಮತಿ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ನಾಡಿದ್ದು ದಿನಾಂಕ 10 ರ ಬುಧವಾರ ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವರು.
ಸಾರ್ವಜನಿಕರು ವಿವಿಧ ಇಲಾಖೆಗಳಿಗೆ ಸಲ್ಲಿಸಿದ ಅರ್ಜಿಗಳನ್ನು ವಿಲೇ ಮಾಡದೇ ಬಾಕಿ ಇಟ್ಟಿದ್ದಲ್ಲಿ ಅಂತಹ ದೂರುಗಳನ್ನು ಸಲ್ಲಿಸಬಹುದಾಗಿದೆ.