ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಂದ ಅರ್ಜಿ

ದಾವಣಗೆರೆ. ಜ. 7 – ಮೆಟ್ರಿಕ್ ಪೂರ್ವ  ಮತ್ತು ಮೆಟ್ರಿಕ್ ನಂತರದ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಎಸ್.ಎಸ್.ಪಿ. ಪೋರ್ಟಲ್‍ನಲ್ಲಿ (https://ssp.postmatric.karnataka.gov.in) or (https://twd.karnataka.gov.in) ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು, ದಾವಣಗೆರೆ, ಚನ್ನಗಿರಿ ಜಗಳೂರು ಹಾಗೂ ಸಹಾಯಕ ನಿರ್ದೇಶಕರು, (ಗ್ರೇಡ್-2) ಸಮಾಜ ಕಲ್ಯಾಣ ಇಲಾಖೆ, ಹರಿಹರ ಮತ್ತು ಹೊನ್ನಾಳಿ  ಸಂಪರ್ಕಿಸಲು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಬೇಬಿ ಸುನೀತಾ ತಿಳಿಸಿದ್ದಾರೆ.

error: Content is protected !!