ಯುವ ನಿಧಿ ಯೋಜನೆಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ

ಯುವ ನಿಧಿ ಯೋಜನೆಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ

ಹೊನ್ನಾಳಿ, ಜ.11- ನಾಳೆ ದಿನಾಂಕ 12ರ ಶುಕ್ರವಾರ ಬೆಳಿಗ್ಗೆ 11.30ಕ್ಕೆ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಯುವ ನಿಧಿ ಯೋಜನೆಗೆ ಶಿವಮೊಗ್ಗದ ಫ್ರೀಡಂ ಪಾರ್ಕ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದಾರೆ ಎಂದು ಶಾಸಕ ಡಿ.ಜಿ.ಶಾಂತನಗೌಡ  ತಿಳಿಸಿದ್ದಾರೆ.

ಯುವ ನಿಧಿ ಯೋಜನೆಯು ಕಾಂಗ್ರೆಸ್ ಪಕ್ಷದ 5ನೇ ಗ್ಯಾರಂಟಿ ಯೋಜನೆಯಾಗಿದ್ದು, ಮುಖ್ಯಮಂತ್ರಿಗಳು ಚಾಲನೆ ನೀಡಿ ಯುವ ನಿರುದ್ಯೋಗಿಗಳ ಖಾತೆಗೆ ಹಣ ವರ್ಗಾಯಿಸಲಿದ್ದಾರೆ. 

ಇದೊಂದು ಪಕ್ಷದ ಐತಿಹಾಸಿಕ ಕಾರ್ಯಕ್ರಮವಾಗಿದ್ದು ಕಾಂಗ್ರೆಸ್ ಪಕ್ಷ ನುಡಿದಂತೆ ನಡೆದು ಜನರ ಮನಸ್ಸನ್ನು ಗೆದ್ದಿದೆ ಎಂದು ಹೇಳಲು ಹರ್ಷವಾಗುತ್ತದೆ ಎಂದರು.

ಯುವ ನಿಧಿ ಯೋಜನೆಯಡಿಯಲ್ಲಿ 70,000 ನಿರುದ್ಯೋಗಿಗಳು ಈಗಾಗಲೇ ನೋಂದಾಯಿಸಿಕೊಂಡಿದ್ದಾರೆ. ಯುವ ಜನತೆಯ ಉಜ್ವಲ ಭವಿಷ್ಯಕ್ಕಾಗಿ ಸರ್ಕಾರದ 5ನೇ ಗ್ಯಾರಂಟಿ ಯೋಜನೆಯಲ್ಲಿ ಪ್ರತೀ ತಿಂಗಳು ನಿರುದ್ಯೋಗ ಭತ್ಯೆಯಾಗಿ ಪದವೀಧರರಿಗೆ 3,000 ಮತ್ತು ಡಿಪ್ಲೋಮಾ ತೇರ್ಗಡೆಯಾದವರಿಗೆ 1,500 ರೂ.ಗಳನ್ನು ಅವರ ಖಾತೆಗೆ ನೇರವಾಗಿ ವರ್ಗಾವಣೆಯಾಗಲಿದೆ ಎಂದು ಅವರು ಹೇಳಿದರು.

ಈ ಕಾರ್ಯಕ್ರಮಕ್ಕೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಸಚಿವ ಸಂಪುಟದ ಬಹುತೇಕ ಸಚಿವರು, ಶಾಸಕರುಗಳು ಮತ್ತು ಪಕ್ಷದ ಕಾರ್ಯಕರ್ತರುಗಳು ಭಾಗವಹಿಸಲಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಭಾಗವಹಿಸಲು ಹೊನ್ನಾಳಿ-ನ್ಯಾಮತಿ ಅವಳಿ ತಾಲ್ಲೂಕುಗಳಿಂದ 30 ಬಸ್‍ಗಳ ವ್ಯವಸ್ಥೆ ಮಾಡಲಾಗಿದೆ ಎಂದು ವಿವರಿಸಿದರು.

error: Content is protected !!