ಭಾನುವಳ್ಳಿ: ಪ್ರತಿಮೆ ತೆರವುಗೊಳಿಸುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ, ಸೂಕ್ತ ಸ್ಪಂದನೆ

ಭಾನುವಳ್ಳಿ: ಪ್ರತಿಮೆ ತೆರವುಗೊಳಿಸುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ, ಸೂಕ್ತ ಸ್ಪಂದನೆ

ಮಲೇಬೆನ್ನೂರು, ಜ. 16- ಭಾನುವಳ್ಳಿ ಗ್ರಾಮದಲ್ಲಿ  ಮದಕರಿ ನಾಯಕ ಮಹಾದ್ವಾರದ ಪಕ್ಕದಲ್ಲೇ ಅನಧಿಕೃತವಾಗಿ ಪ್ರತಿಷ್ಠಾಪಿಸಿರುವ ಸಂಗೊಳ್ಳಿ ರಾಯಣ್ಣನ ಪ್ರತಿಮೆಯನ್ನು ತೆರವುಗೊಳಿಸುವಂತೆ ಜಿಲ್ಲಾ ವಾಲ್ಮೀಕಿ ನಾಯಕ ಸಮಾಜದ ಅಧ್ಯಕ್ಷ ಬಿ. ವೀರಣ್ಣ ಅವರ ನೇತೃತ್ವದಲ್ಲಿ ಭಾನುವಳ್ಳಿಯ  ಗ್ರಾಮಸ್ಥರು ಮಂಗಳವಾರ ಜಿಲ್ಲಾಧಿಕಾರಿ ಡಾ.ಎಂ.ವಿ. ವೆಂಕಟೇಶ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಗ್ರಾಮದಲ್ಲಿ ಸಾಮರಸ್ಯ ಹದಗೆಡದಂತೆ ಕೂಡಲೇ ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ಭರವಸೆ ನೀಡಿದರು. ಈ ವೇಳೆ ಹಾಜರಿದ್ದ ಮಹಿಳೆಯರೂ ಕೂಡ ನಮ್ಮ ಬಗ್ಗೆ ಅಸಭ್ಯವಾಗಿ ಮಾತನಾ ಡುತ್ತಿದ್ದಾರೆ. ಅಂತಹ ವ್ಯಕ್ತಿಗಳ ಮೇಲೆ ಕ್ರಮಕೈಗೊಳ್ಳಿ ಎಂದು ಡಿಸಿಗೆ ಮನವಿ ಮಾಡಿದರು.

ಅಪರ ಜಿಲ್ಲಾಧಿಕಾರಿ ಲೋಕೇಶ್, ಡಿಸಿಸಿ ಬ್ಯಾಂಕ್ ಮಾಜಿ ಉಪಾಧ್ಯಕ್ಷ ಜಿಗಳಿ ಆನಂದಪ್ಪ, ಮಠದ ಧರ್ಮದರ್ಶಿ ಕೆ.ಬಿ. ಮಂಜುನಾಥ್, ವಕೀಲ ಎನ್.ಎಂ. ಆಂಜನೇಯ ಗುರೂಜಿ, ಶ್ಯಾಗಲೆ ಮಂಜು ನಾಥ್, ನಗರಸಭೆ ಸದಸ್ಯ ದಿನೇಶ್ ಬಾಬು ಶ್ರೀಮತಿ ಪಾರ್ವತಿ ಬೋರಯ್ಯ, ಶ್ರೀಮತಿ ವಿಜಯಶ್ರೀ ಮಹೇಂದ್ರ ಕುಮಾರ್, ಮಕರಿ ಪಾಲಾಕ್ಷಪ್ಪ, ಕೊಕ್ಕ ನೂರು ಸೋಮ ಶೇಖರ್, ದೇವರಬೆಳಕೆರೆ ಮಹೇಶ್ವರಪ್ಪ, ತಿಮ್ಮೇನಹಳ್ಳಿ ರಾಜಪ್ಪ, ಭಾನುವಳ್ಳಿಯ ಟಿ.ಪುಟ್ಟಪ್ಪ, ಸಿದ್ಧಪ್ಪ ದೊಡ್ಡಮನಿ ಇನ್ನೂ ಅನೇಕರು ಈ ವೇಳೆ ಹಾಜರಿದ್ದರು.

error: Content is protected !!