ಆಕ್ಸ್ಫರ್ಡ್ ಇಂಗ್ಲಿಷ್ ಮೀಡಿಯಮ್ ಪ್ರೈಮರಿ ಮತ್ತು ಹೈಸ್ಕೂಲ್ನ ಬೆಳಕು ಕಾರ್ಯಕ್ರಮದಲ್ಲಿ ಕಸಾಪ ಜಿಲ್ಲಾಧ್ಯಕ್ಷ ಬಿ.ವಾಮದೇವಪ್ಪ
ದಾವಣಗೆರೆ, ಜ. 16 – ಇಂದಿನ ಮಕ್ಕಳಲ್ಲಿ ಓದುವ, ಬರೆಯುವ ಆಸಕ್ತಿ ಕ್ಷೀಣಿಸುತ್ತಿದೆ. ಬದ ಲಾಗಿ ಮೊಬೈಲ್ ಆಕರ್ಷಣೆಗೆ ಒಳಗಾಗುತ್ತಿದ್ದಾರೆ. ಇದರಿಂದ ಅವರ ವಿವೇಚನಾ ಶಕ್ತಿ, ಆಲೋಚನಾ ಸಾಮರ್ಥ್ಯ ಕುಗ್ಗುತ್ತಿದೆ. ಹಾಗಾಗಿ ನಮ್ಮ ಮಕ್ಕಳನ್ನು ಮೊಬೈಲ್ ಮುಕ್ತರನ್ನಾಗಿಸಿ ಅವರ ವಿದ್ಯಾಭ್ಯಾಸದ ಕಡೆಗೆ ಹೆಚ್ಚು ಜವಾಬ್ದಾರಿ ವಹಿಸಿ, ಮುಂದಿನ ಅವರ ಭವಿಷ್ಯಕ್ಕೆ ದಾರಿದೀಪವಾಗಬೇಕೆಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ನ ಅಧ್ಯಕ್ಷ ಬಿ. ವಾಮದೇವಪ್ಪ ಅವರು ಪೋಷಕರಿಗೆ ಕರೆಕೊಟ್ಟರು.
ನಗರದ ಶಾಮನೂರು ಶಿವಶಂಕರಪ್ಪ ಪಾರ್ವತಮ್ಮ ಕಲ್ಯಾಣ ಮಂಟಪದಲ್ಲಿ ಮೊನ್ನೆ ನಡೆದ ಆಕ್ಸ್ಫರ್ಡ್ ಇಂಗ್ಲಿಷ್ ಮೀಡಿಯಮ್ ಪ್ರೈಮರಿ ಮತ್ತು ಹೈಸ್ಕೂಲ್ನ ಬೆಳಕು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ವಿದ್ಯಾರ್ಥಿಗಳು ಹಾಗೂ ಪೋಷಕರನ್ನು ಉದ್ದೇಶಿಸಿ ಅವರು ಮಾತನಾಡಿದರು.
ಅಭ್ಯಾಸದಲ್ಲಿ ನಿರಂತರತೆ ಕಾಪಾಡಿಕೊಳ್ಳಿ, ಶ್ರದ್ದೆ ಹಾಗೂ ಕಠಿಣ ಪರಿಶ್ರಮದಿಂದ ನೀವು ಅಭ್ಯಸಿಸಿದರೆ ನಿಮ್ಮ ಗುರಿಮುಟ್ಟಬಹುದು ಎಂದು ಹೇಳುತ್ತಾ ಮಕ್ಕಳನ್ನು ಪ್ರೋತ್ಸಾಹಿಸಿದರು. ಹಾಗೇ ಪೋಷಕರು ಮಕ್ಕಳ ಮೇಲೆ ಅತಿಯಾದ ಒತ್ತಡ ಹೇರದೆ ಸರಿಯಾದ ಮಾರ್ಗದರ್ಶನ ಮಾಡಬೇಕೆಂದು ತಿಳಿಸುತ್ತಾ ಮಕ್ಕಳ ಬೆಳವಣೆಗೆಯಲ್ಲಿ ಪೋಷಕರ ಜವಾಬ್ದಾರಿ ಹೆಚ್ಚಿರುತ್ತದೆ ಎಂದು ತಿಳಿಸಿದರು.
ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಜಿ.ಕೊಟ್ರೇಶ್, ಅವರು ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಜವಾಬ್ದಾರಿಯಲ್ಲಿ ಶಿಕ್ಷಕರು ಹಾಗೂ ಪೋಷಕರ ಜವಾಬ್ದಾರಿ ಹೆಚ್ಚಾಗಿರುತ್ತದೆ. ಮನೆಯಲ್ಲಿ ಮಕ್ಕಳ ವಿದ್ಯಾಭ್ಯಾಸದ ಕಡೆಗೆ ಪೋಷಕರು ಹೆಚ್ಚು ಮಹತ್ವ ಕೊಡಬೇಕೆಂದು ತಿಳಿಸಿದರು.
ಇನ್ನೋರ್ವ ಮುಖ್ಯ ಅತಿಯಾಗಿ ಆಗಮಿಸಿದ್ದ ಶಿವ ಸಹಕಾರಿ ಬ್ಯಾಂಕ್ನ ಅಧ್ಯಕ್ಷ ಮಾಗನೂರು ಸಂಗಮೇಶ ಗೌಡ್ರು ಮಕ್ಕಳ ವಿದ್ಯಾಭ್ಯಾಸದ ಕುರಿತು ಹಿತ ವಚನ ನೀಡಿದರು.
ಸಂಸ್ಥೆಯ ಕಾರ್ಯದರ್ಶಿ ಕೆ.ಸಿ. ಲಿಂಗರಾಜ್ ಸಂಸ್ಥೆ ನಡೆದು ಬಂದ ದಾರಿಯನ್ನು ವಿವರಿಸಿದರು. ಶಿಕ್ಷಕಿ ರೇಷ್ಮಾ ಸ್ವಾಗತಿಸಿದರು. ಶಾಲಾ ಮಕ್ಕಳು ಪ್ರಾರ್ಥನೆ ನೆರವೇರಿಸಿದರು. ಶಿಕ್ಷಕಿ ಮೇಘನಾ ನಿರೂಪಿಸಿದರು.