ನಗರದಲ್ಲಿಂದು ರಸ್ತೆ ಸುರಕ್ಷತಾ ಸಪ್ತಾಹ

ಸಾರಿಗೆ ಇಲಾಖೆ, ಪೊಲೀಸ್ ಇಲಾಖೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ಸಿವಿಲ್ ಇಂಜಿನಿಯರಿಂಗ್ ವಿಭಾಗ ಇವರ ಸಹಯೋಗದಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹದ ಸಮಾರೋಪ ಸಮಾರಂಭವನ್ನು ಇಂದು ಬೆಳಿಗ್ಗೆ 10.30ಕ್ಕೆ ಯುಬಿಡಿಟಿ ಇಂಜಿನಿಯರಿಂಗ್ ಕಾಲೇಜು ಹೊಸ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.

ಜಿಲ್ಲಾ ಪೊಲೀಸ್ ಅಧೀಕ್ಷಕಿ ಉಮಾ ಪ್ರಶಾಂತ್, ಹಿರಿಯ ಸಿವಿಲ್ ನ್ಯಾಯಾಧೀಶರಾದ ಮಹಾವೀರ ಎಂ. ಕರೆಣ್ಣನವರ, ಸಾರಿಗೆ ಇಲಾಖೆ ಅಧಿಕಾರಿ ಪ್ರಮುತೇಶ್ ಮುಖ್ಯಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಡಾ. ಡಿ.ಪಿ. ನಾಗರಾಜಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ.

error: Content is protected !!