ದಾವಣಗೆರೆ, ಜ. 22- ಭದ್ರಾ ಆಚ್ಚುಕಟ್ಟು ಪ್ರದೇಶದ ಕಾಲುವೆಗಳಲ್ಲಿ ಅಳವಡಿಸಲಾಗಿರುವ ಅನಧಿಕೃತ ಪಂಪ್‌ಸೆಟ್ ತೆರವು ಕಾರ್ಯವು ಇದೇ 24ರಿಂದ ಆರಂಭವಾಗಲಿದೆ. ಚನ್ನಗಿರಿ ತಾಲ್ಲೂಕು ವ್ಯಾಪ್ತಿಯಲ್ಲಿ ಬರುವ ದಾವಣಗೆರೆ ಶಾಖಾ ಕಾಲುವೆ 0.00 ಕಿ.ಮೀ.ಯಿಂದ 30 ಕಿ.ಮೀ. ವರೆಗೆ ಕಾರ್ಯಾಚರಣೆ ನಡೆಯಲಿದೆ. ಅನಧಿಕೃತವಾಗಿ ಕಾಲುವೆ ನೀರನ್ನು ಎತ್ತಿಕೊಳ್ಳಲು ಅಳವಡಿಸಲಾಗಿರುವ ಪಂಪ್‌ಸೆಟ್‌ಗಳನ್ನು ತಕ್ಷಣ ತೆರವುಗೊಳಿಸದೇ ಇದ್ದಲ್ಲಿ ಕಾನೂನು ಕ್ರಮ ಕೈಗೊಳ್ಳ ಲಾಗುವುದು ಎಂದು ಭದ್ರಾ ನಾಲಾ ಉಪ ವಿಭಾಗ ನಂ.3 ಸಹಾಯಕ ಕಾರ್ಯಪಾಲಕ ಇಂಜಿನಿಯರ್ ತಿಳಿಸಿದ್ದಾರೆ.
November 27, 2024