ಭಾರತ್ ಜೋಡೋ ತಡೆ : ನಗರದಲ್ಲಿ ಕಾಂಗ್ರೆಸ್ ಪ್ರತಿಭಟನೆ

ಭಾರತ್ ಜೋಡೋ ತಡೆ : ನಗರದಲ್ಲಿ ಕಾಂಗ್ರೆಸ್ ಪ್ರತಿಭಟನೆ

ದಾವಣಗೆರೆ, ಜ. 23- ಕಾಂಗ್ರೆಸ್ ಪಕ್ಷದ ಅಧಿನಾಯಕ ರಾಹುಲ್ ಗಾಂಧಿ ಹಮ್ಮಿ ಕೊಂಡಿರುವ `ಭಾರತ್ ಜೋಡೋ ನ್ಯಾಯ ಯಾತ್ರೆ’ಗೆ ಅಸ್ಸಾಂ ರಾಜ್ಯದಲ್ಲಿ ಬಿಜೆಪಿ ಕಾ ರ್ಯಕರ್ತರು ತಡೆಯೊಡಿರುವುದನ್ನು ಖಂಡಿಸಿ ನಗರದ ಜಯದೇವ ವೃತ್ತದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಇದೇ ವೇಳೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಬಿ. ಮಂಜಪ್ಪ ಮಾತನಾಡಿ, ರಾಹುಲ್ ಗಾಂಧಿಯವರು ದೇಶದಲ್ಲಿ ಬಿಜೆಪಿ ನಡೆಸುತ್ತಿರುವ ಅನ್ಯಾಯ ಖಂಡಿಸಿ ಹೋರಾಟ ನಡೆಸುತ್ತಿದ್ದಾರೆ. ಆದರೆ ಅಸ್ಸಾಂ ಸರ್ಕಾರ ಬಿಜೆಪಿ ಕಾರ್ಯಕರ್ತರ ಮೂಲಕ ಯಾತ್ರೆಗೆ ಅಡ್ಡಿಪಡಿಸಿ, ಹೋರಾಟ ಹತ್ತಿಕ್ಕುವ ಪ್ರಯತ್ನ ಮಾಡುತ್ತಿ ರುವುದು ಅತ್ಯಂತ ಖಂಡನೀಯ ಎಂದರು.

ಕಾಂಗ್ರೆಸ್ ಪಕ್ಷದವರಾರು ಹಿಂದೂ ವಿರೋಧಿಗಳಲ್ಲಿ. ಸಿದ್ಧರಾಮಯ್ಯ ದೇವಸ್ಥಾನ ಉದ್ಘಾಟನೆ ಮಾಡಿ ನಾವೂ ಹಿಂದೂಗಳು. ರಾಮನ ಭಕ್ತರು ಎಂದು ತೋರಿಸಿಕೊಟ್ಟಿದ್ದಾರೆ. ಬಿಜೆಪಿಯವರು ಇದನ್ನು ಅರ್ಥ ಮಾಡಿಕೊಳ್ಳಬೇಕು. ಕೋಮುವಾದ ಕೈಬಿಡಬೇಕು. ಬಿಜೆಪಿಯವರ ಸುಳ್ಳು ಮಾತಿಗೆ ಮರುಳಾಗದೇ ಬಿಜೆಪಿಯನ್ನು ಕಿತ್ತೊಗೆಯಬೇಕು . ಇದೇ ರೀತಿ ಬಿಜೆಪಿಯವರು ಅನ್ಯಾಯ ಮುಂ ದುವರೆಸಿದರೆ ತಕ್ಕ ಪಾಠ ಕಲಿಸಬೇಕಾಗುತ್ತದೆ ಎಂದು ಎಚ್ಚರಿಸಿದರು. ಬಿಜೆಪಿ ಮುಖಂಡರು ದೇಶದ ಜನರಲ್ಲಿ ವಿನಾಕಾರಣ ಕೋಮು ಭಾವನೆ ಬಿತ್ತುತ್ತಿದ್ದಾರೆ. ನಾವೆಂದಿಗೂ ಹಿಂದೂಗಳ ವಿರೋಧಿಗಳಲ್ಲಿ. ಆದರೆ ಕಾಂಗ್ರೆಸ್ ಪಕ್ಷವನ್ನು ಹಿಂದೂ ವಿರೋಧಿ ಎಂದು ಬಿಂಬಿಸಲಾಗುತ್ತಿದೆ. ರಾಜ್ಯದ ಜನತೆ ಈ ವಿಚಾರದಲ್ಲಿ ಜಾಗರೂಕ ರಾಗಿರಬೇಕೆಂದು ಮನವಿ ಮಾಡಿದರು.

ಕೆಪಿಸಿಸಿ ವಕ್ತಾರ ಡಿ. ಬಸವರಾಜ್ ಮಾತನಾಡಿ, ರಾಹುಲ್ ಗಾಂಧಿ ಅವರ `ಭಾರತ್ ಜೋಡೋ ನ್ಯಾಯಯಾತ್ರೆ’ಗೆ ಸೂಕ್ತ ರಕ್ಷಣೆ ನೀಡಬೇಕು. ಬಿಜೆಪಿಯವರ ಅನ್ಯಾಯದ ವಿರುದ್ಧ ರಾಹುಲ್ ಗಾಂಧಿ ನಿರಂತರ ಹೋರಾಟ ಮಾಡುತ್ತಾ ಬಂದಿದೆ ಎಂದರು.

ಮೊದಲ ಹಂತದ ರಾಹುಲ್ ಅವರ ಭಾರತ ಜೋಡೋ ಯಾತ್ರೆಯಿಂದಾಗಿ ಕರ್ನಾಟಕದಲ್ಲಿ ಕಾಂಗ್ರೆಸ್ ಆಡಳಿತಕ್ಕೆ ಬರುವಂತಾಯಿತು. ಯಾತ್ರೆ ಸಹಿಸದೇ ಆದ್ದರಿಂದ ಈಗಾಗಲೇ ಬಿಜೆಪಿಗೆ ಭಯ ಶುರುವಾಗಿದೆ ಎಂದು ಹೇಳಿದರು.

ಕಾಂಗ್ರೆಸ್ ಮುಖಂಡರಾದ ದಿನೇಶ್ ಕೆ. ಶೆಟ್ಟಿ, ಕೆ.ಜಿ. ಶಿವಕುಮಾರ್, ಶಿವಕುಮಾರ್ ಒಡೆಯರ್, ಕೆ.ಪಿ. ಪಾಲಯ್ಯ, ಎಸ್. ಮಲ್ಲಿಕಾರ್ಜುನ್,ಅನಿತಾಬಾಯಿ ಮಾಲತೇಶರಾವ್ ಜಾಧವ್, ಶುಭಮಂಗಳ, ಕವಿತಾ ಚಂದ್ರಶೇಖರ್, ಮಂಗಳಮ್ಮ , ಟಿ.ಡಿ. ಹಾಲೇಶ್ ಮತ್ತಿತರರು ಉಪಸ್ಥಿತರಿದ್ದರು. 

error: Content is protected !!