ನಗರದಲ್ಲಿ ಇಂದು ಮತದಾರರ ದಿನಾಚರಣೆ

ಭಾರತ ಚುನಾವಣಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಮಹಾನಗರಪಾಲಿಕೆ ದಾವಣಗೆರೆ ಇವರುಗಳ ಸಹಯೋಗದಲ್ಲಿ ಇಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಡಳಿತ ಕಚೇರಿಯ ತುಂಗಾಭದ್ರ ಸಭಾಂಗಣದಲ್ಲಿ 14 ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಕಾರ್ಯಕ್ರಮವನ್ನು  ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಸುರೇಶ್ ಬಿ. ಇಟ್ನಾಳ್ ಉದ್ಘಾಟಿಸುವರು. ಜಿಲ್ಲಾಧಿಕಾರಿ ಡಾ.ವೆಂಕಟೇಶ್ ಎಂ.ವಿ. ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಮ.ಕರೆಣ್ಣವರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್, ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್, ಮಹಾನಗರಪಾಲಿಕೆ ಆಯುಕ್ತೆ ರೇಣುಕಾ ಭಾಗವಹಿಸುವರು.

error: Content is protected !!