ನಗರಕ್ಕೆ ಉಸ್ತುವಾರಿ ಸಚಿವ ಎಸ್ಸೆಸ್ಸೆಂ

ನಗರಕ್ಕೆ ಉಸ್ತುವಾರಿ ಸಚಿವ ಎಸ್ಸೆಸ್ಸೆಂ

ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಸಚಿವರೂ ಆಗಿರುವ  ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರು ಇಂದು ಮತ್ತು ನಾಳೆ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.

ಇಂದು ಸಾರ್ವಜನಿಕರ ಭೇಟಿ ಮತ್ತು ಕುಂದುಕೊರತೆಗಳ ವಿಚಾರಣೆ ಹಾಗೂ ದಾವಣಗೆರೆ ಮತ ಕ್ಷೇತ್ರ ವ್ಯಾಪ್ತಿಯ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸಿ ವಾಸ್ತವ್ಯ ಹೂಡುವರು. ನಾಳೆ ಶುಕ್ರವಾರ ಬೆಳಿಗ್ಗೆ 9 ಗಂಟೆಗೆ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದಿಂದ ಆಯೋಜಿಸಿರುವ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ಭಾಗವಹಿಸುವರು.

error: Content is protected !!