ನಗರದಲ್ಲಿ ಇಂದು ಕುರಿ-ಮೇಕೆ ಸಾಕಾಣಿಕೆ ತರಬೇತಿ

ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ನಗರದ ಪಶು ಆಸ್ಪತ್ರೆ ಅವರಣದಲ್ಲಿರುವ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಇಂದು ಮತ್ತು ನಾಳೆ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿಯನ್ನು ಆಯೋಜಿಸಲಾಗಿದೆ.         

ತರಬೇತಿಗೆ ಹಾಜರಾಗುವ ರೈತರು ಆಧಾರ್‍ಕಾರ್ಡ್ ಜೆರಾಕ್ಸ್, 2 ಪಾಸ್‌ಪೋರ್ಟ್ ಸೈಜ್ ಫೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರ ಜೆರಾಕ್ಸ್ ತರಬೇಕು. ತರಬೇತಿಯಲ್ಲಿ ಯಾವುದೇ ಪ್ರೋತ್ಸಾಹ ಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ, ದಾವಣಗೆರೆ. ದೂ. 08192-233787 ಗೆ ಸಂಪರ್ಕಿಸಬಹುದು ಎಂದು ಮುಖ್ಯ ಪಶು ವೈದ್ಯಾಧಿಕಾರಿ ಚಂದ್ರಶೇಖರ್ ಸುಂಕದ್ ತಿಳಿಸಿದ್ದಾರೆ.

error: Content is protected !!