ವಕ್ಕಲಿಗರ ಪೇಟೆಯ ವಿಜಯಲಕ್ಷ್ಮಿ ರಸ್ತೆಯಲ್ಲಿ ಶ್ರೀ ಹಾಲು ಚೌಡಮ್ಮ ದೇವಿ ದೇವಸ್ಥಾನ ಸೇವಾ ಸಮಿತಿ ವತಿಯಿಂದ ಶ್ರೀ ಹಾಲು ಚೌಡಮ್ಮ ದೇವಿಯ ನೂತನ ವಿಗ್ರಹ ಪ್ರತಿಷ್ಠಾಪನೆ ಮಹೋತ್ಸವವು ಇಂದು ಶ್ರೀ ಮದುಜ್ಜಯಿನಿ ಜಗದ್ಗುರುಗಳ ಮತ್ತು ಶ್ರೀ ಓಂಕಾರ ಶಿವಾಚಾರ್ಯ ಸ್ವಾಮೀಜಿ ನೇತೃತ್ವದಲ್ಲಿ ನಡೆಯಲಿದೆ. ಇಂದು ಬೆಳಿಗ್ಗೆ ದೇವತಾ ಪ್ರತಿಷ್ಠೆ, ಪ್ರತಿಷ್ಠಾ ಹೋಮ, ಶಾಂತಿ ಹೋಮ, ಚಂಡಿಕಾ ಹೋಮ ಹಾಗೂ ಅನ್ನ ಸಂತರ್ಪಣೆ, ಸಂಜೆ ಶ್ರೀ ಕಾಳಿಕಾ ಭಜನಾ ಮಂಡಳಿಯವರಿಂದ ಕುಂಕು ಮಾರ್ಚನೆ, ಲಲಿತಾ ಸಹಸ್ರನಾಮ ಪಠಣ, ಭಜನೆ ನಡೆಯಲಿದೆ.
January 10, 2025