ಮಲೇಬೆನ್ನೂರು, ಫೆ. 4 – ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ಅವರು ಸುಕ್ಷೇತ್ರ ಉಕ್ಕಡಗಾತ್ರಿಗೆ ಭೇಟಿ ನೀಡಿ ಪವಾಡ ಪುರುಷ ಶ್ರೀ ಗುರು ಕರಿಬಸವೇಶ್ವರ ಅಜ್ಜಯ್ಯನ ಗದ್ದುಗೆ ದರ್ಶನ ಪಡೆದರು. ನಂತರ ಅವರು ಕ್ಷೇತ್ರದಲ್ಲಿ ನಡೆದಿರುವ ಅಭಿವೃದ್ಧಿ ಕಾಮಗಾರಿಗಳನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿ, ಸ್ವಚ್ಛತೆಗೆ ಇನ್ನೂ ಹೆಚ್ಚಿನ ಆದ್ಯತೆ ನೀಡುವಂತೆ ದೇವಸ್ಥಾನ ಕಮಿಟಿಗೆ ಸೂಚಿಸಿದರು. ದೇವಸ್ಥಾನ ಕಮಿಟಿ ಕಾರ್ಯದರ್ಶಿ ಸುರೇಶ್ ಮತ್ತಿತರರು ಈ ವೇಳೆ ಹಾಜರಿದ್ದರು.
December 25, 2024