ದಾವಣಗೆರೆ, ಫೆ. 6- ರಾಜ್ಯ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ಜಿಲ್ಲಾ ಘಟಕದಿಂದ ನಗರದ ಗುರು ಭವನದಲ್ಲಿ ಈಚೆಗೆ ಹಮ್ಮಿಕೊಂಡಿದ್ದ ಸಾವಿತ್ರಿಬಾಯಿ ಫುಲೆ ಹಾಗೂ ಫಾತಿಮಾ ಶೇಕ್ ಅವರ ಜಯಂತ್ಯೋತ್ಸವ, ಶೈಕ್ಷಣಿಕ ಕಾರ್ಯಾಗಾರ ಮತ್ತು ಜಿಲ್ಲಾ ಮಟ್ಟದ ಸಾವಿತ್ರಿಬಾಯಿ ಫುಲೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ನಗರದ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆ ಎಲ್ಲಮ್ಮ ನಗರ ದಾವಣಗೆರೆ ದಕ್ಷಿಣ ವಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶ್ರೀಮತಿ ಎಸ್. ಮಂಜುಳಾ ಇವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ ನೀಡಿ ಗೌರವಿಸಿ, ಸನ್ಮಾನಿಸಲಾಯಿತು.
ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಜಿ. ಕೊಟ್ರೇಶ್, ಡಯಟ್ ಪ್ರಾಚಾರ್ಯರಾದ ಎಸ್. ಗೀತಾ, ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ಪುಷ್ಪಲತಾ, ಶೇರ್ ಅಲಿ, ಹನುಮಂತಪ್ಪ, ಡಿಡಿಪಿಐ ಶಿಕ್ಷಣಾಧಿಕಾರಿ ರಾಜಶೇಖರ್, ಸಂಘದ ಜಿಲ್ಲಾಧ್ಯಕ್ಷೆ ಕಲ್ಪನಾ ರವೀಂದ್ರನಾಥ್, ಪ್ರಧಾನ ಕಾರ್ಯದರ್ಶಿ ಹೆಚ್. ಮಂಗಳ, ಖಜಾಂಚಿ ಸಿ. ಪದ್ಮ, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ವೀರೇಶ್ ಒಡೆನಪುರ, ಕಾರ್ಯದರ್ಶಿ ಗುರುಮೂರ್ತಿ, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಮುಬಾರಕ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ರಾಮಣ್ಣ ಹಾಗು ಇತರರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಸಾವಿತ್ರಿಬಾಯಿ ಫುಲೆ ಹಾಗೂ ಜ್ಯೋತಿರಾವ್ ಫುಲೆ ಹೆಸರಿನಲ್ಲಿ ಜಿಲ್ಲೆಯ ಎಲ್ಲಾ ತಾಲೂಕಿನ 56 ಶಿಕ್ಷಕರಿಗೆ ಪ್ರಶಸ್ತಿ ಪ್ರಧಾನ ಮಾಡಲಾಯಿತು.