ಪ್ರಚೋದನಾಕಾರಿ ಹೇಳಿಕೆ: ಕೆ.ಎಸ್. ಈಶ್ವರಪ್ಪ ವಿರುದ್ಧ ಪ್ರಕರಣ ದಾಖಲು

ದಾವಣಗೆರೆ,  ಫೆ.9- ದೇಶ ವಿಭಜನೆ ಹೇಳಿಕೆ ನೀಡುವ ದೇಶ ದ್ರೋಹಿಗಳನ್ನು ಗುಂಡಿಕ್ಕಿ ಕೊಲ್ಲುವಂತಹ ಕಾನೂನು ತನ್ನಿ ಎಂದು ಹೇಳಿಕೆ ನೀಡಿರುವ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರ ಮೇಲೆ ನಗರದ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಜಲಿಂಗಪ್ಪ ಬಡಾವಣೆಯ ವಾಸಿ ಹನುಮಂತ ಎಂಬುವವರು ಶುಕ್ರವಾರ ಬಡಾವಣೆ ಪೊಲೀಸ್ ಠಾಣೆಯಲ್ಲಿ ಈಶ್ವರಪ್ಪ ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ದಾಖಲಿಸಿದ್ದಾರೆ.

ಸ್ಥಳೀಯ ಶಾಮನೂರು ಶಿವಶಂಕರಪ್ಪ ಪಾರ್ವತಮ್ಮ ಕಲ್ಯಾಣ ಮಂಟಪದಲ್ಲಿ ನಿನ್ನೆ ಹಮ್ಮಿಕೊಳ್ಳಲಾಗಿದ್ದ ಬಿಜೆಪಿ ಜಿಲ್ಲಾ ನೂತನ ಜಿಲ್ಲಾಧ್ಯಕ್ಷರು ಹಾಗೂ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಸಂಸದ ಡಿ.ಕೆ ಸುರೇಶ್ ಹಾಗೂ ವಿನಯ್ ಕುಲಕರ್ಣಿ ಅವರ ವಿರುದ್ಧ ಹರಿಹಾಯ್ದಿದ್ದರು. ಅಲ್ಲದೇ, ಮೋದಿಯವರೇ, ಇಂತಹ ದೇಶ ದ್ರೋಹಿಗಳನ್ನು ಗುಂಡಿಕ್ಕಿ ಕೊಲ್ಲುವಂತಹ ಕಾನೂನು ತನ್ನಿ ಎಂದು ಹೇಳಿಕೆ ಕೊಟ್ಟಿದ್ದರು ಎಂದು ದೂರಲಾಗಿದೆ. ಡಿ.ಕೆ. ಸುರೇಶ್, ವಿನಯ್ ಕುಲಕರ್ಣಿ ಕೊಲ್ಲುವಂತಹ ಕಾನೂನು ತರಬೇಕು ಎಂದು ಪ್ರಾಣ ಬೆದರಿಕೆ ಹಾಕಿರುವ ಹೇಳಿಕೆ ನೀಡಿದ ಪರಿಣಾಮ ಜನಗಳ ಮಧ್ಯೆ ಗಲಭೆಗಳಾಗಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ಆಗುವ ಸಂಭವ ವಿರುತ್ತದೆ. ಆದ್ದರಿಂದ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಹನುಮಂತಪ್ಪ ಅವರು ಪೊಲೀಸರಿಗೆ ನೀಡಿರುವ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

error: Content is protected !!