ದಾವಣಗೆರೆ, ಫೆ.12- ನಗರದ ಎಸ್.ಬಿ.ಸಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ನಾಲ್ವರು ವಿದ್ಯಾರ್ಥಿನಿಯರು ಸಿಎ ಸಂಸ್ಥೆ ನಡೆಸುವ ಪರೀಕ್ಷೆಯಲ್ಲಿ ಕು. ಐಶ್ವರ್ಯ ಶಾನ್‌ಬಾಗ್ ಸಿಎ ಅಂತಿಮ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. ಕು. ಕೃಪಾ ಕನವಳ್ಳಿ ಸಿಎ ಇಂಟರ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. ಕು. ಎ.ಪವಿತ್ರ ಸಿಎ ಫೌಂಡೇಷನ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. ರಕ್ಷಾ ಆರ್.ಅಜ್ಜಂಪುರ ಅವರು ಸಿಎ ಇಂಟರ್‌ಮೀಡಿಯೇಟ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ.
ಈ ಎಲ್ಲಾ ವಿದ್ಯಾರ್ಥಿಗಳನ್ನು ಶ್ರೀ ವಿನಾಯಕ ಎಜುಕೇಷನ್ ಟ್ರಸ್ಟಿನ ಮ್ಯಾನೇಜಿಂಗ್ ಟ್ರಸ್ಟಿ ಡಾ. ಅಥಣಿ ವೀರಣ್ಣ, ಕಾರ್ಯದರ್ಶಿ ಎನ್.ಎ. ಮುರುಗೇಶ್, ಕಾಲೇಜಿನ ಅಧ್ಯಕ್ಷ ಬಿ.ಸಿ.ಉಮಾಪತಿ, ವಿನಾಯಕ ಎಜುಕೇಷನ್ ಟ್ರಸ್ಟ್‌ನ ಎಲ್ಲಾ ಸದಸ್ಯರುಗಳು, ಕಾಲೇಜಿನ ಪ್ರಾಂಶುಪಾಲ ಡಾ. ಕೆ. ಷಣ್ಮುಖ ಮತ್ತು ಅಧ್ಯಾಪಕರುಗಳು ಹಾಗೂ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.